ಕಾರವಾರಹಾಗೂ ಕೊಚ್ಚಿ ನೌಕಾ ಸೇನಾ ನೆಲೆಗಳ ಮಾಹಿತಿ ಪಾಕಿಸ್ತಾನಕ್ಕೆ ನೀಡುತ್ತಿದ್ದ ಮೂವರ ಬಂಧನ

40

“ಪಾಕಿಸ್ತಾನ ಮೂಲದ ಗುಪ್ತಚರ ಅಧಿಕಾರಿಗಳಿಗೆ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಮೂವರನ್ನು ಎನ್ ಐ ಎ ಬಂಧಿಸಿದೆ.

ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಬಂಧಿತ ಆರೋಪಿಗಳು ಹಂಚಿಕೊಳ್ಳುತ್ತಿದ್ದರು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಪ್ರಕಟಣೆಯಲ್ಲಿ ತಿಳಿಸಿದೆ.

ವೇತನ್ ಲಕ್ಷ್ಮಣ್ ತಂಡೇಲ್ ಮತ್ತು ಅಕ್ಷಯ್ ರವಿ ನಾಯಕ್ ಅವರನ್ನು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂಧಿಸಲಾಗಿದ್ದರೆ, ಅಭಿಲಾಷ್ ಪಿಎ ಅವರನ್ನು ಕೇರಳದ ಕೊಚ್ಚಿಯಿಂದ ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ.

ಮಂಗಳವಾರ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಬಂಧಿಸಲಾದ ಈ ಮೂವರು ಆರೋಪಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನ ಗುಪ್ತಚರ ಕಾರ್ಯಾಚರಣೆ(PIO) ಗಳೊಂದಿಗೆ ಸಂಪರ್ಕದಲ್ಲಿ ಇರುವುದು ಕಂಡುಬಂದಿದೆ ಎಂದು ಎನ್ಐಎ ಹೇಳಿದೆ.

ಎನ್ಐಎ ತನಿಖೆಯ ಪ್ರಕಾರ, ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು

ಮತ್ತು ಈ ಮಾಹಿತಿಗಾಗಿ ಅವರು ಪಿಐಒಗಳಿಂದ ಹಣ ಪಡೆಯುತ್ತಿದ್ದರು. ಈ ಮೂವರು ಸೇರಿದಂತೆ ಪ್ರಕರಣದಲ್ಲಿ ಇದುವರೆಗೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಎನ್ಐಎ ತಿಳಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...