” ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಉಪ ಮುಖ್ಯ ಮಂತ್ರಿ ಯಾಗಿ ಪರ್ವೇಶ್ ಆಯ್ಕೆಯಾಗಿದ್ದಾರೆ.
ಫೆಬ್ರವರಿ 5ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ 27 ವರ್ಷಗಳ ವನವಾಸ ಅಂತ್ಯಗೊಂಡಿತ್ತು
. ದೆಹಲಿ ವಿಧಾನಸಭೆಯ ಚುನಾವಣೆಯ ಫಲಿತಾಂಶ ಬಂದ 11 ದಿನಗಳ ಬಳಿಕ ಸಿಎಂ ಹೆಸರನ್ನು ಬಿಜೆಪಿ ಘೋಷಿಸಿದೆ.
ಪ್ರಸ್ತುತ ಭಾರತೀಯ ಜನತಾ ಪಕ್ಷ ಆಳುತ್ತಿರುವ ರಾಜ್ಯಗಳಲ್ಲಿ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿರುವ ರೇಖಾ ಗುಪ್ತಾ, ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ 29,595 ಮತಗಳ ಅಂತರದಿಂದ ಗೆದ್ದಿದ್ದರು.
ಮೊದಲ ಬಾರಿ ಶಾಸಕಿಯಾಗಿರುವ 50 ವರ್ಷದ ರೇಖಾ ಗುಪ್ತಾ ಅವರು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದ ಪರ್ವೇಶ್ ವರ್ಮಾ ಉಪಮುಖ್ಯಮಂತ್ರಿಯಾಗಲಿದ್ದಾರೆ. ನಿಯೋಜಿತ ಮುಖ್ಯಮಂತ್ರಿಗಳು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
ದೆಹಲಿಯ ನೂತನ ಸಿಎಂ ಮತ್ತು ಅವರ ಸಚಿವ ಸಂಪುಟ ಗುರುವಾರ ಪ್ರತಿಷ್ಠಿತ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದೆ. ಕೇಸರಿ ಪಕ್ಷವು 70 ಸದಸ್ಯರ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಆಮ್ ಆದ್ಮಿ ಪಕ್ಷದ (ಎಎಪಿ) ದಶಕದ ಆಡಳಿತವನ್ನು ಕೊನೆಗೊಳಿಸಿತು.
ಆಮ್ ಆದ್ಮಿ ಪಕ್ಷವು ಕೇವಲ 22 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಅರವಿಂದ್ ಕೇಜ್ರಿವಾಲ್ ಅವರು ನವದೆಹಲಿ ಕ್ಷೇತ್ರ ಮತ್ತು ಮನೀಶ್ ಸಿಸೋಡಿಯಾ ಅವರು ಜಂಗ್ಪುರದಿಂದ ಸೋತಿದ್ದರು.