ಜನರಿಗೆ ಭರವಸೆ ನೀಡಿದ ಗ್ಯಾರೆಂಟಿ ಯೋಜನೆಗಳನ್ನು ಸರಿಯಾಗಿ ಅನುಷ್ಠಾನ  ಮಾಡದೆ ಸರಕಾರ ಮೋಸ ಮಾಡಿದೆ ಸಚಿವೆ ಶೋಭಾ ಕರಂದ್ಲಾಜೆ

2

“ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಈಗ ಯೋಜನೆಗಳನ್ನು ನಿಲ್ಲಿಸಿ ರಾಜ್ಯದ ಜನತೆಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ.

ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬುಧವಾರ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ

. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದರೆ, ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಲುಪುತ್ತಿಲ್ಲ, ಬಸ್ ಫ್ರೀ ಎಂದು ಹೇಳಿದ್ದರು

. ಆದರೆ, ಬಸ್ ನಿಲ್ಲಿಸಿದ್ರು ಗೃಹಲಕ್ಷ್ಮೀ ಯೋಜನೆಯ 2 ಸಾವಿರ ಹಣ ತಲುಪುತ್ತಿಲ್ಲ. ಸಿದ್ದರಾಮಯ್ಯ ಯೋಜನೆಗಳು ನಿಂತಿದೆಯಾ ಎಂದು ಕೇಳಿದ್ದಾರೆ.

ಹಣಕಾಸು ಇಲಾಖೆ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ ಕರ್ನಾಟಕದಲ್ಲಿ ಪ್ರತಿನಿತ್ಯ ಒಂದಲ್ಲ ಒಂದರ ದರ ಏರಿಕೆಯಾಗುತ್ತಿದೆ ಎಂದು ಕಿಡಿಕಾರಿದರು

. 10 ಕೆಜಿ ಕೊಡುತ್ತೀವೆ ಎಂದಿದ್ದರು. ಈಗ ಅಕ್ಕಿ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ. ಹೊಸ 9 ವಿವಿ ಬಂದ್ ಮಾಡಿದ್ದಾರೆ.

ಹಳೆಯ ವಿವಿಗಳಿಗೆ ಹಣವನ್ನೇ ಕೊಡ್ತಿಲ್ಲ. ಹಾಗಾದರೆ ಹೊಸ ವಿವಿಯಿಂದ ಸರ್ಟಿಫಿಕೇಟ್ ಪಡೆದವರ ಕಥೆ ಏನು..? ಇದಕ್ಕೆ ಯಾವುದೇ ಸ್ಪಷ್ಟತೆಯನ್ನು ಸರ್ಕಾರ ಕೊಟ್ಟಿಲ್ಲ. ಕಂದಾಯ ಇಲಾಖೆಯಲ್ಲಿ ಸಿಬ್ಬಂದಿಗೆ ಸಂಬಳ ಕೊಟ್ಟಿಲ್ಲ.

ಈ ನಡುವೆ ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ಟ್ಯಾಕ್ಸ್ ವ್ಯವಸ್ಥೆ ಜಾರಿಯಾಗಿದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಕಟ್ಟಬೇಕೆಂದರೆ ಅಡಿಗೆ 100 ರೂ. ಕೊಡಬೇಕಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ದನದ ಕೆಚ್ಚಲು ಕೊಯ್ದವರನ್ನು ಮಾನಸಿಕ ಅಸ್ವಸ್ಥ ಎನ್ನುತ್ತಾರೆ

. ಪೊಲೀಸ್ ಠಾಣೆಗೆ ದಾಳಿ ಮಾಡಲಾಗಿದೆ, ಆಸ್ಪತ್ರೆಯಲ್ಲಿ ಬಾಣಂತಿಯ ಸಾವಾಗುತ್ತಿದೆ, ಎಲ್ಲವನ್ನ ಕೇಂದ್ರ ಸರ್ಕಾರ ಮಾಡೋದಾದ್ರೆ ಸಿದ್ದರಾಮಯ್ಯನವರೇ ನೀವು ಏಕೆ ಅಧಿಕಾರ ನಡೆಸುತ್ತೀರಿ ಎಂದು ಪ್ರಶ್ನಿಸಿದರು.

ಮೆಟ್ರೋ ದರ ಏರಿಕೆ ಕುರಿತು ಮಾತನಾಡಿ, ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಮೆಟ್ರೋ ಅಧಿಕಾರಿಗಳು ಟಿಕೆಟ್ ದರ ಹೆಚ್ಚಳಕ್ಕೆ ಪತ್ರ ಬರೆದಿದ್ದರು.

ನಿಮ್ಮ ಒತ್ತಡಕ್ಕೆ ಒಳಗಾಗಿ ಕೇಂ‍ದ್ರ ಅನುಮತಿ ಕೊಟ್ಟಿದೆ ಎಂದು ಎಂದರು. ಜಾತಿ ಜನಗಣತಿ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ಒಡೆದು ಆಳುವ ನೀತಿ ಮಾಡುತ್ತಿದ್ದಾರೆ.

ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣರ ಉಪಜಾತಿಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಮೇಜರ್ ಜಾತಿ ಒಡೆಯಬೇಕು ಎಂದು ಮಾಡುತ್ತಿದ್ದಾರೆ.

ಬ್ರಿಟಿಷರ ಮೆಂಟಾಲಿಟಿ ಸಿದ್ದರಾಮಯ್ಯನವರದ್ದು ಎಂದು ಲೇವಡಿ ಮಾಡಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...

ನವೆಂಬರ್ ನಂತರ ಕರ್ನಾಟಕ ರಾಜ್ಯದ ಮುಂದಿನ ಮುಖ್ಯ ಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅಥವಾ ಖರ್ಗೆ :: ಎಚ್‌ ವಿಶ್ವನಾಥ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚೆಂದರೆ ನವೆಂಬರ್ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ನಂತರ ಸಿಎಂ...