ಮುಂದುವರೆದ ಕರ್ನಾಟಕ ಸರಕಾರ ಹಾಗೂ ರಾಜ್ಯಪಾಲರ ನಡುವೆ ಜಟಾಪಟಿ ಮಸೂದೆಗಳಿಗೆ ಸಹಿ ಹಾಕದೆ ಹಿಂದೆ ಕಳುಹಿಸಿದ ರಾಜ್ಯಪಾಲರು

47

“ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ಮುಂದುವರಿದಿದೆ. ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳಿಗೆ ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಕ್ಕೆ ವಾಪಸ್ ಕಳುಸಿದ್ದಾರೆ.

ಈ ತಿದ್ದುಪಡಿಯು ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದು ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು.

ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ. ವಿಶ್ವವಿದ್ಯಾಲಯದ ಎಲ್ಲ ನೇಮಕಾತಿ, ಆಡಳಿತಾತ್ಮಕ ಅಧಿಕಾರ ಮುಖ್ಯಮಂತ್ರಿಗಳಿಗೆ ಸೇರಲಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ.

ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-2024ಕ್ಕೆ ಸಹಿ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.

ರಾಜ್ಯಸರ್ಕಾರ ಮಂಡಿಸಿದ ಮಸೂದೆಗಳನ್ನು ಸಹಿ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸುತ್ತಿರುವುದು ಇದು ಮೊದಲೇನಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಗಟ್ಟುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ಹಲವು ಸ್ಪಷ್ಟನೆ ಕೇಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...