ಮಾನವೀಯತೆ ಮರೆತ ಪೊಲೀಸರು ನಾಲ್ಕು ತಿಂಗಳ ಗರ್ಭಿಣಿ ಮಹಿಳೆಯನ್ನು ತಡರಾತ್ರಿವರೆಗೆ ಠಾಣೆಯಲ್ಲಿ ಕುಳ್ಳಿರಿಸಿದ್ದಕ್ಕೆ ವ್ಯಾಪಕ ಆಕ್ರೋಶ

3
ರಾಜ್ಯ ರಾಜಧಾನಿ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರು ತಡರಾತ್ರಿವರೆಗೂ ಸಂಕಷ್ಟ ಅನುಭವಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ.


ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕಳೆದ ದಿನ ರಾತ್ರಿ ತಡರಾತ್ರಿಯವರೆಗೂ ಗರ್ಭಿಣಿ ಮಹಿಳೆ ಪರದಾಡಿದ್ದಾರೆ. ರಾತ್ರಿ 10 ಗಂಟೆವರೆಗೂ ಠಾಣೆಯಲ್ಲಿ ನಾಲ್ಕು ತಿಂಗಳ ಗರ್ಭಿಣಿಯನ್ನು ಇರಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ.

ನಿಯಮದ ಪ್ರಕಾರ ಗರ್ಭಿಣಿ ಮಹಿಳೆಯನ್ನು ಸಂಜೆ ಆರು ಗಂಟೆ ಒಳಗೆ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಬೇಕು.

ಆದರೆ ರಾತ್ರಿ 10 ಗಂಟೆವರೆಗೆ ಠಾಣೆಯಲ್ಲಿಯೇ ಪೊಲೀಸರು ಗರ್ಭಿಣಿಯನ್ನು ಇರಿಸಿಕೊಂಡಿದ್ದು, ಈ ಬಗ್ಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ

. ರಾತ್ರಿ 10 ಗಂಟೆ ಬಳಿಕ ಪೊಲೀಸರಿಂದ ಸಖಿ ಕೇಂದ್ರಕ್ಕೆ ಗರ್ಭಿಣಿಯನ್ನು ಶಿಫ್ಟ್ ಮಾಡಲಾಗಿದೆ. ಹೀಗಾಗಿ ಪೊಲೀಸರ ಮೇಲೆ ಕರ್ತವ್ಯ ಲೋಪದ ಆರೋಪ ಕೇಳಿ ಬಂದಿದೆ.

ನಿಯಮಗಳ ಪ್ರಕಾರ ಸಂಜೆ 6 ಗಂಟೆ ನಂತರ ಯಾವುದೇ ಮಹಿಳೆಯನ್ನು ಠಾಣೆಗೆ ಕರೆತರುವಂತಿಲ್ಲ. ಜೊತೆಗೆ ಠಾಣೆಯಲ್ಲಿ ಇಟ್ಟುಕೊಳ್ಳುವಂತಿಲ್ಲ.


ಆದರೆ,. ಇಲ್ಲಿ ಪೊಲೀಸರು ಆ ನಿಯಮವನ್ನು ಉಲ್ಲಂಘಿಸಿದ್ದಾರೆ. ಒಬ್ಬ ಗರ್ಭಿಣಿ ಅನ್ನೋದನ್ನು ನೋಡದೆ ಪೊಲೀಸರು ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ

ಕೆಸಿ ಜನರಲ್ ಆಸ್ಪತ್ರೆಗೆ ನಿಯಮಿತ ತಪಾಸಣೆಗಾಗಿ ನಾಲ್ಕು ತಿಂಗಳ ಗರ್ಭಿಣಿ ತೆರಳಿದ್ದು, ಈ ವೇಳೆ ಆಸ್ಪತ್ರೆಯ ವೈದ್ಯರು ಗರ್ಭಿಣಿಯ ಆಧಾರ್ ಕಾರ್ಡ್‌ ಪರಿಶೀಲನೆ ಮಾಡಿದ್ದಾರೆ.

ಈ ವೇಳೆ ಆಕೆಗೆ ವಯಸ್ಸು 18 ವರ್ಷ, 1 ತಿಂಗಳು ಮತ್ತು 20 ದಿನಗಳು ಎಂಬುದು ಗೊತ್ತಾಗಿದೆ.

ಯುವತಿ 4 ತಿಂಗಳ ಗರ್ಭಿಣಿಯಿರುವ ಕಾರಣ 18 ವರ್ಷಕ್ಕೂ ಮೊದಲೇ ಮದುವೆಯಾಗಿರುವುದು ಗೊತ್ತಾಗಿದೆ. ಅಂದರೆ ಬಾಲ್ಯವಿವಾಹವಾಗಿರುವುದು ತಿಳಿದುಬಂದಿದೆ

. ಹೀಗಾಗಿ ಈ ಬಗ್ಗೆ ಶೇಷಾದ್ರಿಪುರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆಸಿಕೊಂಡಿದ್ದಾರೆ.

ಮಧ್ಯಾಹ್ನ ಎರಡು ಗಂಟೆಗೆ ಪತಿ ಹಾಗೂ ಪತ್ನಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಆದರೆ, ಪೊಲೀಸರು ರಾತ್ರಿ ಹತ್ತು ಗಂಟೆವರೆಗೂ ಅವರನ್ನು ಕೂರಿಸಿ ಕಾಲಹರಣ ಮಾಡಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ಈ ಬಗ್ಗೆ ಇಲಾಖಾ ತನಿಖೆ ಆರಂಭಿಸಲಾಗಿದೆ ಎಂದು ಹೇಳಿದರು.

ಈ ಬಗ್ಗೆ ವರದಿಯನ್ನು ಕೋರಲಾಗಿದ್ದು, ಶೇಷಾದ್ರಿಪುರಂ ಪೊಲೀಸ್ ಅಧಿಕಾರಿಗಳ ವಿರುದ್ಧದ ಆರೋಪಗಳ ತನಿಖೆ ನಡೆಸಲು ಕೇಂದ್ರ ವಿಭಾಗದ ಡಿಸಿಪಿ ಮತ್ತು ಶೇಷಾದ್ರಿಪುರಂ ಉಪ ವಿಭಾಗದ ಎಸಿಪಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...