ಮುಸಲ್ಮಾನರ ವಿರುದ್ಧ ಅವಹೇಳನಕಾರಿ ಹೇಳಿಕೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ ಐ ಆರ್

2

“ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ

. ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಪ್ರತಾಪ್ ಸಿಂಹ ಅವರು, ‘ದೇಶ ಇಬ್ಭಾಗವಾದಾಗಲೇ ಮುಸ್ಲಿಮರು ಈ ದೇಶ ಬಿಟ್ಟು ತೊಲಗಿಬಿಡಬೇಕಿತ್ತು.

ಇಲ್ಲಿ ಉಳಿದಕೊಂಡವರು ಮಕ್ಕಳನ್ನು ಹುಟ್ಟಿಸುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ ಹೇಳಿ? ಎಂದು ಹೇಳಿದ್ದರು.

ಸೋಷಿಯಲ್ ಮಿಡೀಯಾದಲ್ಲಿ ವ್ಯಕ್ತಿಯೊಬ್ಬ ಮಾಡಿದ್ದ ಪೋಸ್ಟ್ ವೊಂದು ಒಂದು ಸಮುದಾಯವನ್ನು ಕೆರಳಿಸಿತ್ತು.

ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಯುವಕನೋರ್ವ ಸಂಸದ ರಾಹುಲ್ ಗಾಂಧಿ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿವಸ್ತ್ರಗೊಳಿಸಿ, ಭಾವಚಿತ್ರಕ್ಕೆ ತಲೆ ಮೇಲೆ ಮುಸ್ಲಿಮರು ಬಳಸುವ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದ ಬರೆದು ಪೋಸ್ಟ್ ಮಾಡಿದ್ದ.

ಇದು ಮುಸ್ಲಿಂ ಸಮುದಾಯದವರು ಕೆರಳುವಂತೆ ಮಾಡಿತ್ತು. ಬಳಿಕ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು‌.

ಆತನನ್ನು ವಶಕ್ಕೆ ನೀಡುವಂತೆ  ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದರು. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು

Leave a comment

Leave a Reply

Your email address will not be published. Required fields are marked *

Related Articles

ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...