ದೆಹಲಿ ವಿರೋಧ ಪಕ್ಷ ನಾಯಕಿಯಾಗಿ ಮಾಜಿ ಸಿಎಂ ಅತಿಶಿ ಆಯ್ಕೆ

54

“ಭಾನುವಾರ ಇಲ್ಲಿ ನಡೆದ ಎಎಪಿ ಶಾಸಕರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೇರಿದಂತೆ ಆಮ್ ಆದ್ಮಿ ಪಕ್ಷದ 22 ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಈ ಕುರಿತು ಪಕ್ಷಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಅವರು, ‘ನನ್ನಲ್ಲಿ ನಂಬಿಕೆಯನ್ನು ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಶಾಸಕಾಂಗ ಪಕ್ಷಕ್ಕೆ ಧನ್ಯವಾದಗಳು.

ಪ್ರಬಲ ಪ್ರತಿಪಕ್ಷವು ಜನರ ಧ್ವನಿಯನ್ನು ಎತ್ತಿ ಹಿಡಿಯುತ್ತದೆ. ಆಮ್ ಆದ್ಮಿ ಪಕ್ಷವು ಬಿಜೆಪಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತದೆ’ ಎಂದರು. ದೆಹಲಿ ವಿಧಾನಸಭೆಯ ಮೊದಲ ಅಧಿವೇಶನ ಫೆಬ್ರುವರಿ 24 ರಿಂದ ಆರಂಭವಾಗಲಿದೆ.

ಮೂರು ದಿನ ನಡೆಯುವ ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಹಿಂದಿನ ಎಎಪಿ ಸರ್ಕಾರದ ವಿರುದ್ಧ ಬಾಕಿ ಉಳಿದಿರುವ ಸಿಎಜಿ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು ಎಂದು ಹೇಳಿದೆ.

ಫೆಬ್ರುವರಿ 5 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆದ್ದು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ.

ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಪಕ್ಷದ ಹಲವಾರು ಪ್ರಮುಖ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...