ಜಿಲ್ಲೆಯಾದ್ಯಂತ ಸರಕಾರದ ಹೆಸರು ಕೆಡಿಸುವಂತ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳನ್ನು ನಡೆಸಲು ಆಸ್ಪದ ನೀಡುವುದಿಲ್ಲ- ಕೃಷ್ಣ ಶೆಟ್ಟಿ ಬಜಗೋಳಿ 

41

ಶಾಸಕರ ಹೆಸರನ್ನು ಬಳಿಸಿಕೊಂಡು ಅಥವಾ ಕಾಂಗ್ರೆಸ್ ಸರಕಾರದ ಹೆಸರು ದುರುಪಯೋಗ ಪಡಿಸಿಕೊಂಡು ಉಡುಪಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳು ,ಅಕ್ರಮ ಗಣಿಗಾರಿಕೆ , ಅಕ್ರಮ ಮರಳು ದಂಧೆ ಮಾಡುವವರ ವಿರುದ್ಧ ಸಂಬಂದಪಟ್ಟ ಇಲಾಖೆಯವರು ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕು.

ಸೂಕ್ತ ಪರವಾನಗಿ ಇಲ್ಲದೇ ಸರ್ಕಾರದ ರಾಯಧನಕ್ಕೆ ಧಕ್ಕೆ ಉಂಟು ಮಾಡುವಂತಹ ಅಕ್ರಮ ದಂಧೆಗಳಲ್ಲಿ ಭಾಗಿಯಾಗುತ್ತಿದ್ದಲ್ಲಿ ಅಂತವರ ವಿರುದ್ದ ಸಂಬಂಧ ಪಟ್ಟ ಇಲಾಖೆಗಳು ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ಸಮಿತಿಯು ಉಡುಪಿ ಜಿಲ್ಲೆಯಾದ್ಯಂತ ಯುವ ಸಮುದಾಯವನ್ನು ಸಂಘಟಿಸಿ ಒಗ್ಗಟ್ಟಿನಿಂದ ಸಾಮಾಜಿಕ ಕಳಕಳಿಯುಳ್ಳ ಸಮಾಜಮುಖಿ ಕಾರ್ಯಗಳು, ಧಾರ್ಮಿಕ ಕಾರ್ಯಕ್ರಮಗಳು,

ಯುವ ಸಮುದಾಯಕ್ಕೆ ಉದ್ಯೊಗ ಸೃಷ್ಟಿಯ ಕುರಿತು ಚಿಂತನೆ, ಸಮಾಜದ ಕಟ್ಟಕಡೆಯ ಹಾಗೂ ಶೋಷಿತರ ದ್ವನಿಯಾಗುತ್ತದೆಯೇ ವಿನಹ ಅಕ್ರಮ ದಂಧೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ.

ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಯುವ ಕಾಂಗ್ರೆಸ್ ಸಮಿತಿಯು ಅಕ್ರಮ ಚಟುವಟಿಕೆಗಳನ್ನು ಹದ್ದುಬಸ್ತಿಗೆ ತರಲು ಶ್ರಮಿಸುತ್ತದೆ.

ಯಾವುದೇ ಕಾರಣಕ್ಕೂ ಯಾರಿಂದನೂ ಕಾಂಗ್ರೆಸ್ ಸರಕಾರಕ್ಕೆ ಕೆಟ್ಟ ಹೆಸರು ತರಲು ಅವಕಾಶ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕೃಷ್ಣ ಶೆಟ್ಟಿ ಬಜಗೋಳಿಯವರು ಯುವ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷರಾದ ಬಳಿಕದ ತಮ್ಮ ಪ್ರಪ್ರಥಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...