ಗೆಳತಿ ಹಾಗೂ ಆಕೆಯ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆಗೈದ   ಆರೋಪಿ ಅಫಾನ್

37

ಕೇರಳದ ತಿರುವನಂತಪುರದ ವೆಂಜರಮೂಡು ಎಂಬಲ್ಲಿ 23 ವರ್ಷದ ಯುವಕನೊಬ್ಬ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು 5 ಮಂದಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಕೊಲೆ ಮಾಡಿದ ಆರೋಪಿಯನ್ನು ಅಫಾನ್ (23) ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಗೆಳತಿ, ಸಹೋದರ, ಅಜ್ಜಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಚಾಕು ಮತ್ತು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಇದಾದ ಬಳಿಕ ಆರೋಪಿ ತಾಯಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ ಬಳಿಕ ತಾನೂ ವಿಷ ಸೇವಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರು ಹತ್ಯೆಗೈದಿರುವುದಾಗಿ ಹೇಳಿಕೊಂಡಿದ್ದಾನೆ.

ಆರೋಪಿ ತನ್ನ ಗೆಳತಿ, ಸಹೋದರ, ಅಜ್ಜಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಚಾಕು ಮತ್ತು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇದಾದ ಬಳಿಕ ಆರೋಪಿ ತಾಯಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ ಬಳಿಕ ತಾನೂ ವಿಷ ಸೇವಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರು ಶರಣಾಗಿದ್ದಾನೆ.

ಅಫಾನ್ ಹೇಳಿಕೆಯಿಂದ ಬೆಚ್ಚಿಬಿದ್ದ ಪೊಲೀಸರು ವಿಷ ಸೇವಿಸಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಬಳಿಕ ಆತನ ಹೇಳಿಕೆ ಮೇರೆಗೆ ಹಲ್ಲೆ ಹತ್ಯೆ ನಡೆದಿರುವ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಅದರಂತೆ ಆರೋಪಿಯ ಸಹೋದರ ಅಹ್ಸಾನ್, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ ಮತ್ತು ಆತನ ಗೆಳತಿ ಫರ್ಶಾನಾ ಸೇರಿದಂತೆ 5 ಜನರ ಸಾವನ್ನು ಪೊಲೀಸರು ಇದುವರೆಗೆ ಖಚಿತಪಡಿಸಿದ್ದಾರೆ.

ಜೊತೆಗೆ ತಾಯಿ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಸ್ಥಳದಿಂದ ಸುತ್ತಿಗೆ ವಶಪಡಿಸಿಕೊಂಡಿದ್ದಾರೆ. ಬೆಳಗ್ಗೆ 10 ರಿಂದ ಸಂಜೆ 6ರ ಸಮಯದಲ್ಲಿ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಅಫನ್ ಇತ್ತೀಚೆಗಷ್ಟೆ ತನ್ನ ಮನೆಗೆ ತನ್ನ ಗೆಳತಿಯನ್ನು ಕರೆ ತಂದಿದ್ದ. ಆತ ಯುಎಇಯಲ್ಲಿ ತನ್ನ ತಂದೆಯ ಪೀಠೋಪಕರಣ ವ್ಯವಹಾರದಲ್ಲಿ ನೆರವು ನೀಡುತ್ತಿದ್ದ. ಆದರೆ, ಆತನ ತಂದೆ ಹಣಕಾಸು ಬಿಕ್ಕಟ್ಟಿಗೆ ತುತ್ತಾಗಿದ್ದರಿಂದ, ಆತ ಮನೆಗೆ ಮರಳಿದ್ದ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...