ಕರ್ನಾಟಕದ ಬಸ್ ಹಾಗೂ ಸಿಬ್ಬಂದಿಗಳ ಮೇಲೆ ಮಹಾರಾಷ್ಟ್ರದಲ್ಲಿ ದಾಳಿ ಬಸ್ ಸಂಚಾರ ಸ್ಥಗಿತ

50

“ಬಸ್‌ಗಳು ಮತ್ತು ಅವುಗಳ ಸಿಬ್ಬಂದಿಗಳ ಮೇಲೆ ದಾಳಿ ನಡೆದ ನಂತರ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಸಾರಿಗೆ ಸಂಸ್ಥೆಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. “ನಾವು ನಿನ್ನೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದ್ದೇವೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ(MSRTC) ಸಹ ಕರ್ನಾಟಕಕ್ಕೆ ಬಸ್‌ಗಳ ಕಾರ್ಯಾಚರಣೆಯನ್ನು ನಿಲ್ಲಿಸಿದೆ” ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(NWKRTC)ದ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಇಂದು ಬೆಳಗಾವಿ ಚಲೋ ಗೆ ಕರೆ ನೀಡಿದ್ದು, ಬೆಳಗಾವಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಭಾಷಾ ವಿಚಾರವಾಗಿ ಬಸ್ ನಿರ್ವಾಹಕನ ಮೇಲೆ ನಡೆದ ಈ ಹಲ್ಲೆ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವಿನ ಸಂಪರ್ಕಕ್ಕೆ ಕುತ್ತು ಉಂಟು ಮಾಡಿದೆ.

ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್‌ ನಿರ್ವಾಹಕ ಮಹಾದೇವ ಹುಕ್ಕೇರಿ ಮೇಲೆ ಹಲ್ಲೆ ನಡೆಸಲಾಗಿತ್ತು. ಮರಾಠಿ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕಾಗಿ ಪುಂಡರು ಹಲ್ಲೆ ನಡೆಸಿದ್ದರು.

ಈ ಸಂಬಂಧ ಮಾರಿಹಾಳ ಠಾಣೆ ಪೊಲೀಸರು ಈಗಾಗಲೇ ಐವರನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಬಸ್ ನಿರ್ವಾಹಕ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...