ಕೇಂದ್ರ ಜಲ ಶಕ್ತಿ ಸಚಿವಸಿ ಆರ್ ಪಾಟೀಲ್ ರನ್ನು ಭೇಟಿಯಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರಾಜ್ಯದಲ್ಲಿ 6ಹೊಸ ಯೋಜನೆಗಳಿಗೆ ಅನುಮತಿ ಕೋರಿಕೆ

1

“ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ಮತ್ತು ಹಣಕಾಸಿನ ನೆರವು ನೀಡುವಂತೆ ಕೋರಿದರು.

ಜೊತೆಗೆ ಈಗಾಗಲೇ ಅಸ್ತಿತ್ವದಲ್ಲಿರುವ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ಮತ್ತು ಹಣ ಬಿಡುಗಡೆಗೂ ಮನವಿ ಮಾಡಿದರು.

ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ 11,123 ಕೋಟಿ ರೂ.ಗಳ ಅಂದಾಜು ವೆಚ್ಚದ ಆರು ಹೊಸ ನೀರಾವರಿ ಯೋಜನೆಗಳಿಗೆ ಅನುದಾನ ಕೋರಿದ್ದಾರೆ.

ಈ ಆರು ಹೊಸ ಪ್ರಸ್ತಾವನೆಗಳಲ್ಲಿ ಪ್ರವಾಹ ನಿರ್ವಹಣೆ ಮತ್ತು ಬೆಣ್ಣೆಹಳ್ಳದಲ್ಲಿ ಗಡಿ ಪ್ರದೇಶದ ಕಾರ್ಯಕ್ರಮ; ಭೀಮಾ ನದಿಗೆ ಅಡ್ಡಲಾಗಿ ಸೋಂತಿ ಏತ ನೀರಾವರಿ ಯೋಜನೆಯಡಿ 16,000 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದು, ಮಲಪ್ರಭಾ ಕಾಲುವೆ ವಿಸ್ತರಣೆ,

ನವೀಕರಣ ಮತ್ತು ಆಧುನೀಕರಣ (ERM), ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಇಂಡಿ ಶಾಖಾ ಕಾಲುವೆ, ಘಟಪ್ರಭಾ ಬಲದಂಡೆ ಕಾಲುವೆ, ಚಿಕ್ಕೋಡಿ ಶಾಖಾ ಕಾಲುವೆ ಮತ್ತು ತುಂಗಭದ್ರಾ ಎಡದಂಡೆ ಕಾಲುವೆ ಕಾಮಗಾರಿ ಸೇರಿವೆ.

ಈ ಉದ್ದೇಶಿತ ಯೋಜನೆಗಳಿಂದ ವಿಜಯಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ಮೇಕೆದಾಟು ಯೋಜನೆಗೆ ಮಂಜೂರಾತಿ, ಭದ್ರಾ ಮೇಲ್ದಂಡೆ ಯೋಜನೆಗೆ ಆರ್ಥಿಕ ನೆರವು, ಕೃಷ್ಣಾ ಜಲವಿವಾದ ನ್ಯಾಯಮಂಡಳಿ (ಕೆಡಬ್ಲ್ಯುಡಿಟಿ-2) ತೀರ್ಪಿನ ಗೆಜೆಟ್ ಅಧಿಸೂಚನೆ, ಕಳಸಾ-ಭಂಡೂರಿ ನಾಲಾ ಯೋಜನೆಗಳಿಗೆ ಮಂಜೂರಾತಿ

, ಮಹಾನದಿಯಿಂದ ಹೆಚ್ಚುವರಿ ನೀರನ್ನು ಕೃಷ್ಣಾ-ಕಾವೇರಿ ನದಿಗೆ ಮತ್ತು ಪೆನ್ನಾರ್-ಪಾಲಾರ್ ಜಲಾನಯನ ಪ್ರದೇಶಗಳಿಗೆ ಹರಿಸುವ ಕುರಿತು ಮತ್ತು ರಾಜ್ಯದ ಇತರ ನೀರಾವರಿ ಯೋಜನೆಗಳ ಬಗ್ಗೆಯೂ ಕೇಂದ್ರ ಜಲಶಕ್ತಿ ಸಚಿವರಿಗೆ ಸಲ್ಲಿಸಿರುವ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...