ವಕ್ಫ್ ಮಸೂದೆಗೆ ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

1

“ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.

ಈ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ಪಡೆಯಲು ಹಾದಿ ಸುಗಮಗೊಂಡಂತಾಗಿದೆ.

ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ಭಾರತೀಯ ಬಂದರು ಮಸೂದೆಯ ಜೊತೆಗೆ ಕಳೆದ ವಾರ ಈ ಮಸೂದೆಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ. ಸರ್ಕಾರ ಈ ಮಸೂದೆಯನ್ನು ಆದ್ಯತೆಯ ಪಟ್ಟಿಯಲ್ಲಿ ಸೇರಿಸಿದೆ.

ಫೆ.13ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ ಒಪ್ಪಿಗೆ ಸೂಚಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಸಂಸತ್ತಿನಲ್ಲಿ 2025ರ ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಈ ವೇಳೆ ವಿಕ್ಷಗಳು ಗದ್ದಲದಿಂದಾಗಿ ಸ್ವಲ್ಪ ಸಮಯದ ವರೆಗೆ ಕಲಾಪವನ್ನು ಮುಂದೂಡಲಾಯಿತು.

ಅಲ್ಲದೇ, ವಿಪಕ್ಷ ಸಂಸದರು ತಮ್ಮ ಭಿನ್ನಾಭಿಪ್ರಾಯವನ್ನು ಜೆಪಿಸಿ ವರದಿಯಲ್ಲಿ ತಿರುಚಲಾಗಿದೆ ಎಂದು ದೂರಿದರು. ಆದರೆ, ಕೇಂದ್ರವು ಈ ಆರೋಪವನ್ನು ನಿರಾಕರಿಸಿತು. ಕಳೆದ ವಾರವಷ್ಟೇ ಮಸೂದೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿತ್ತು.

ಈ ಮೂಲಕ ಮಾರ್ಚ್ 10 ರಂದು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ವಕ್ಫ್ ಆಸ್ತಿಗಳ ನೋಂದಣಿಯನ್ನು ಸುಗಮಗೊಳಿಸುವ ಗುರಿ ಹೊಂದಿತ್ತು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿ, ಪ್ರತಿಪಕ್ಷಗಳ ಭಿನ್ನಾಭಿಪ್ರಾಯದ ನಡುವೆ ಶಾಸನಕ್ಕೆ ಹಲವು ತಿದ್ದುಪಡಿಗಳನ್ನು ಸೂಚಿಸಿದೆ.


ಕಳೆದ ಜನವರಿಯಲ್ಲಿ ಜೆಪಿಸಿ ಸಭೆಯಲ್ಲಿ ವಿಪಕ್ಷ ಸಂಸದರು ಸೇರಿ ಇತರರು 44 ತಿದ್ದುಪಡಿಗಳಿಗೆ ಸೂಚಿಸಿದ್ದರು. ಈ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಮಾತ್ರವೇ ಜಂಟಿ ಸಂಸದೀಯ ಸಮಿತಿ ಅಂಗೀಕರಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...