ಪೋಕ್ಸೋ ಪ್ರಕರಣ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ ಒಂದನೇ ತ್ವರಿತಗತಿ ನ್ಯಾಯಾಲಯ

45

“ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮುಂದೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಸೂಚಿಸಿ ಸಮನ್ಸ್ ಜಾರಿ ಮಾಡಿದೆ.

ಯಡಿಯೂರಪ್ಪ ಅವರ ಜೊತೆ ಸಹ-ಆರೋಪಿಗಳಾದ ವೈ.ಎಂ. ಅರುಣಾ, ರುದ್ರೇಶ ಮತ್ತು ಮರುಳಸಿದ್ಧಯ್ಯ ಜಿ. ಮರಿಸ್ವಾಮಿ ಅವರಿಗೆ ಸಹ ಸಮನ್ಸ್ ಜಾರಿ ಮಾಡಿ ಮಾರ್ಚ್ 15ರಂದು ವಿಚಾರಣೆ ನಿಗದಿಪಡಿಸಿದೆ. ಪೋಕ್ಸೋ ಪ್ರಕರಣದಲ್ಲಿ ಇತ್ತೀಚೆಗೆ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.

, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸೂಚಿಸಿತ್ತು. ವಿಚಾರಣೆಗೆ ಮೊದಲು ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು

ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ, ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ.

ಆದ್ದರಿಂದ ಇದೀಗ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ದಿನ ನಿಗದಿಪಡಿಸಿದೆ. ಏನಿದು ಪ್ರಕರಣ ಬಿ ಎಸ್ ಯಡಿಯೂರಪ್ಪ ಅವರ ಬಳಿ ಸಹಾಯ ಕೋರಿ ತಾಯಿ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗಳು ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸಕ್ಕೆ ಬಂದಿದ್ದ ಬಾಲಕಿಯನ್ನು ಕೋಣೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಈ ಸಂಬಂಧ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....