ನನ್ನ ಧರ್ಮದ ಆಚರಣೆಯಲ್ಲಿ ನನ್ನ ವಿರುದ್ಧ  ಸಾವಿರ ಟೀಕೆಗಳು ಬಂದರು ನನ್ನ ಧರ್ಮದ ನಂಬಿಕೆ ಬದಲಾಗದು ಡಿಕೆ ಶಿವಕುಮಾರ್

1

“ಇಶಾ ಫೌಂಡೇಶನ್ ನಲ್ಲಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಕ್ಕಾಗಿ ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾವಿರ ಟೀಕೆಗಳು ಬಂದರೂ, ನನ್ನ ನಂಬಿಕೆ ನನ್ನದು ಎಂದು ಟೀಕಾ ಪ್ರಹಾರ ನಡೆಸಿದವರಿಗೆ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಪುಸ್ತಕ ಮೇಳ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ಹಿಂದೂ ಆಗಿಯೇ ಹುಟ್ಟಿದ್ದೇನೆ ಹಿಂದೂ ಆಗಿ ಸಾಯುತ್ತೇನೆ ಎಂಬ ಹೇಳಿಕೆಯನ್ನು ಸ್ವಾಗತಿಸಿರುವ ಬಿಜೆಪಿಗೂ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು

, ಯಾವ ಬಿಜೆಪಿಯ ಸ್ವಾಗತ ಬೇಡ, ಕಾಂಗ್ರೆಸ್ ಅವರು ಸ್ವಾಗತ ಮಾಡುವುದು ಬೇಡ. ಮಾಧ್ಯಮಗಳು ಮಾತನಾಡುವ ಅವಶ್ಯಕತೆ ಇಲ್ಲ. ನನ್ನ ವೈಯಕ್ತಿಕ ನಂಬಿಕೆ ನನ್ನದು ಎಂದು ಹೇಳಿದ್ದಾರೆ. ನಾನು ಹೋಗಿದ್ದು ಶಿವರಾತ್ರಿಗೆ.

ಇದು ನನ್ನ ಸ್ವಂತ ನಂಬಿಕೆ ಎಂದು ಹೇಳುವ ಮೂಲಕ ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್‌ ಟೀಕೆ, ಎಚ್ಚರಿಕೆಗಳಿಗೆ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಯಾವ ಧರ್ಮದಲ್ಲಿ ಹುಟ್ಟಬೇಕು ಎಂದು ಯಾರು ಅರ್ಜಿ ಹಾಕಿಕೊಂಡಿಲ್ಲ. ಅಂಬೇಡ್ಕರ್ ಹಿಂದೂ ಧರ್ಮದಲ್ಲಿ ಹುಟ್ಟಿ ಬೌದ್ದ ಧರ್ಮಕ್ಕೆ ಸೇರಿಕೊಂಡರು. ಅದು ಅವರ ಇಷ್ಟ. ನನ್ನ ನಂಬಿಕೆಗಳ ಬಗ್ಗೆ ಚರ್ಚೆ ಆದರೆ ಚರ್ಚೆ ಆಗುತ್ತನೇ ಇರಲಿ ಎಂದರು.

ಕುಂಭಮೇಳದ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದನ್ನೂ ವಿರೋಧಿಸಿರುವ ಡಿಕೆ ಶಿವಕುಮಾರ್, ಕುಂಭಮೇಳಕ್ಕೂ ರಾಜಕೀಯಕ್ಕೂ ಏನ್ ಸಂಬಂಧ? ನೀರು, ಗಾಳಿಗೆ ಜಾತಿ ಇದೆಯಾ? ಅಲ್ಲೂ 3 ನದಿ ಸೇರುತ್ತದೆ. ಟಿ ನರಸಿಪುರದಲ್ಲೂ 3 ನದಿ ಸೇರುತ್ತದೆ. ಅದು ಕಮ್ಯೂನಲ್ ವಿಷಯ ಅಲ್ಲ. ಕುಂಭ ಮೇಳವನ್ನು ಯೋಗಿ ಸರ್ಕಾರ ಅದ್ಭುತವಾಗಿ ಆಯೋಜಿಸಿದೆ;

ಸ್ಪೀಕರ್ ಯುಟಿ ಖಾದರ್ ಸಹ ಕುಂಭಮೇಳ ಕ್ಕೆ ಹೋಗಿದ್ದರು. ಕುಂಭಮೇಳದಲ್ಲಿ ಹೇಗೆ ವ್ಯವಸ್ಥೆ ಅಂತ ನೋಡಿಕೊಂಡು ಬಂದಿದ್ದೇನೆ. ಕಾವೇರಿ ಆರತಿ ಬಗ್ಗೆಯೂ ಮಾತಾಡಿದ್ದೇನೆ. ಅದಕ್ಕೆ ರಾಜಕೀಯ ಬೆಳೆಸಬೇಡಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...