ಮಾರ್ಚ್ 22 ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಯಾವುದೇ ಪರೀಕ್ಷೆ ಮುಂದೂಡಿಕೆ ಇಲ್ಲ ಶಿಕ್ಷಣ ಸಚಿವ ಮಧು ಬಂಗಾರಪ್ಪ

54

“ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ.

ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ ಎಂದು ಹೇಳಿದರು. ಮಕ್ಕಳಿಗೆ ಯಾವುದೇ ತೊಂದರೆ ಆಗದ ರೀತಿ ಸಹಕಾರ ನೀಡಬೇಕೆಂದು ಹೋರಾಟಗಾರರಿಗೆ ಮನವಿ ಮಾಡುತ್ತೇನೆ. ಹೋರಾಟ ಮಾಡೋಕೆ ನಿಮಗೆ ಹಕ್ಕು ಇದೆ. ಆದರೆ, ಪರೀಕ್ಷೆ ಮಕ್ಕಳಿಗೆ ಬಹಳ ಮುಖ್ಯವಾದದ್ದು. ಮಕ್ಕಳ ಭವಿಷ್ಯ ಪರೀಕ್ಷೆಯಲ್ಲಿದೆ.

ಮಕ್ಕಳ ಭವಿಷ್ಯಕ್ಕೆ ಯಾವುದೇ ಅಡಚಣೆ ಮಾಡುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು. ಬಂದ್ ಮಾಡುವ ಹೋರಾಟಗಾರರು ಪರೀಕ್ಷೆಗೆ ಹೋಗಬೇಡಿ ಎಂದು ಮಕ್ಕಳಿಗೆ ಹೇಳುವುದಿಲ್ಲ. ಮಕ್ಕಳು ಗೊಂದಲ ಆಗುವುದು ಬೇಡ. 6,7,8,9 ನೇ ತರಗತಿ ಪರೀಕ್ಷೆಗಳು ನಿಗದಿಯಂತೆ ನಡೆಯುತ್ತವೆ. ಮಕ್ಕಳು ಪರೀಕ್ಷೆ ಬರೆಯಲಿ.

ಈಗಾಗಲೇ ವೇಳಾಪಟ್ಟಿ ಸಿದ್ಧತೆ ಮಾಡಿ ಪ್ರಕಟ ಮಾಡಿದ್ದೇವೆ‌. ವೇಳಾಪಟ್ಟಿ ಬದಲಾವಣೆ ಆದರೆ, ಕಷ್ಟ ಆಗುತ್ತದೆ. ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಿಕೆ ಸರಿಯಲ್ಲ ಎಂದರು. ಇದೇ ವೇಳೆ 6 ವರ್ಷದ ನಿಯಮ ವಿಚಾರ ಕುರಿತು ಮಾತನಾಡಿದ ಅವರು, 6 ವರ್ಷದ ನಿಯಮ ಸಡಿಲಿಕೆ ಸಾಧ್ಯವಿಲ್ಲ

. ಇದರಲ್ಲಿ ನಾನೇನು ಮಾಡಲು ಸಾಧ್ಯವಿಲ್ಲ. ಈಗಾಗಲೇ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಕೂಡಾ ಅವರ ಅರ್ಜಿ ವಜಾ ಮಾಡಿದೆ. ನ್ಯಾಯಾಲಯ ಏನೇ ಆದೇಶ ಕೊಟ್ಟರೂ ಅದನ್ನು ಪಾಲನೆ ಮಾಡುತ್ತೇವೆಂದು ಹೇಳಿದರು.

6 ವರ್ಷದ ನಿಯಮದಿಂದ ಬೇಸರವಾಗುತ್ತದೆ ನಿಜ. ಆದರೆ ನಿಯಮದ ಪ್ರಕಾರ ನಾವು ನಡೆಯಬೇಕು. 1 ತಿಂಗಳು, 2 ತಿಂಗಳು ಕಡಿಮೆ ಇರುವವರಿಗೆ ಕೊಟ್ಟರೆ ಮತ್ತೊಬ್ಬರು ಕೇಳುತ್ತಾರೆ. ಇದೆಲ್ಲವೂ ಬಹಳ ಚರ್ಚೆ ಆಗುವ ವಿಷಯ. ಎಷ್ಟೋ ಪೋಷಕರು 7 ದಿನ ಕಡಿಮೆ ಅಂತಿದ್ದಾರೆ.

ಆದರೆ, ಅದು ಕಾನೂನಿನಲ್ಲಿ ಇಲ್ಲ‌. ನಾವು ಅದನ್ನು ಪರಿಗಣಿಸಲು ಸಾಧ್ಯವಿಲ್ಲ. ಈಗ ಈ ವಿಷಯ ಕೋರ್ಟ್ ನಲ್ಲಿದೆ. ಕೋರ್ಟ್ ನಲ್ಲಿ ನಿರ್ಧಾರ ಬಂದರೆ ನಾವು ತೀರ್ಮಾನ ಮಾಡಬಹುದು. ಕೋರ್ಟ್ ಆದೇಶದಂತೆ ನಡೆದುಕೊಳ್ಳುತ್ತೇವೆಂದರು.

Leave a comment

Leave a Reply

Your email address will not be published. Required fields are marked *

Related Articles

ಶಬರಿಮಲೆ ಅಯ್ಯಪ್ಪ ಬ್ರಹ್ಮಚಾರಿ; ಅಗತ್ಯ ಧಾರ್ಮಿಕ ನಿರ್ಬಂಧ ಎತ್ತಿ ಹಿಡಿಯಬಹುದು: ಸುಪ್ರೀಂ ಕೋರ್ಟ್ ನಲ್ಲಿ ದೇವಾಲಯದ ಪರ ವಕೀಲರ ವಾದ

“ನವದೆಹಲಿ: ಸುಪ್ರೀಂ ಕೋರ್ಟ್ ಮಂಗಳವಾರ ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕರನ್ನು, ಜನ್ಮ ಅಥವಾ ಸ್ಥಾನಮಾನದ...

ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂಕ 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಸಚಿವ ಮಧು ಬಂಗಾರಪ್ಪ

“ಬೆಂಗಳೂರು: SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ...

ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷದಲ್ಲಿ ಅವರಿಗೆ ನೀಡುವ ಗೌರವ :: ಏಕನಾಥ್ ಶಿಂಧೆ

ಇತ್ತೀಚಿಗೆ ನಡೆದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಹಾಯುತಿಯಲ್ಲಿ ಈಗ...

ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ

ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ...