ತಿರುಮಲ ಬೆಟ್ಟದ ಮೇಲೆ ವಿಮಾನ ಹಾರಾಟ ನಿಷೇಧಿತ ವಲಯ ಘೋಷಿಸುವಂತೆ ಕೇಂದ್ರ ಸರಕಾರಕ್ಕೆ ಟಿಟಿಡಿ ಮನವಿ

57

“ವಿಶ್ವವಿಖ್ಯಾತ ಮತ್ತು ಹಿಂದೂಗಳ ಪವಿತ್ರ ಯಾತ್ರಾತಾಣವನ್ನು ನಿಷೇಧಿತ ವಲಯವೆಂದು ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ತಿರುಪತಿ ತಿರುಮಲ ದೇಗುಲ ಸಂಸ್ಥೆ ಟಿಟಿಡಿ ಮನವಿ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಪವಿತ್ರ ತಿರುಮಲ ಕ್ಷೇತ್ರದಲ್ಲಿ ವೈಮಾನಿಕ ಹಾರಾಟ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದರಿಂದ ತಿರುಮಲದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಟಿಟಿಡಿ ಹೇಳಿದೆ.

ಈ ಕುರಿತು ಮಾತನಾಡಿರುವ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಶನಿವಾರ, ‘ತಿರುಮಲವನ್ನು ಹಾರಾಟ ನಿಷೇಧಿತ ವಲಯವೆಂದು ಘೋಷಿಸಲು ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಅವರು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದರು.

ಆಗಮ ಶಾಸ್ತ್ರ (ಪವಿತ್ರ ಗ್ರಂಥಗಳು), ದೇವಾಲಯದ ಪಾವಿತ್ರ್ಯ ಮತ್ತು ಭಕ್ತರ ಸುರಕ್ಷತೆ ಮತ್ತು ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತಿರುಮಲವನ್ನು ಹಾರಾಟ ನಿಷೇಧಿತ ವಲಯವೆಂದು ಘೋಷಿಸಬೇಕು ಎಂದು ಅವರು ಹೇಳಿದರು.

ತಿರುಮಲ ಬೆಟ್ಟದ ಮೇಲಿನ ಕೆಳಮಟ್ಟದ ಹಾರುವ ವಿಮಾನಗಳು, ಹೆಲಿಕಾಪ್ಟರ್‌ಗಳು ಮತ್ತು ಇತರ ವೈಮಾನಿಕ ಚಟುವಟಿಕೆಗಳು ಶ್ರೀವಾರಿ (ವೆಂಕಟೇಶ್ವರ) ದೇವಾಲಯದ ಸುತ್ತಲಿನ ಪವಿತ್ರ ವಾತಾವರಣವನ್ನು ತೊಂದರೆಗೊಳಿಸುತ್ತಿವೆ” ಎಂದು ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.

ತಿರುಮಲದ ಪಾವಿತ್ರ್ಯತೆ ಮತ್ತು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ರಕ್ಷಿಸಲು, ಸೂಕ್ತ ಕ್ರಮಕ್ಕಾಗಿ ಈ ವಿಷಯದಲ್ಲಿ ಪ್ರತಿಕ್ರಿಯಿಸುವಂತೆ ಟಿಟಿಡಿ ಅಧ್ಯಕ್ಷರು ಕೇಂದ್ರ ಸಚಿವರನ್ನು ಕೋರಿದರು.

Leave a comment

Leave a Reply

Your email address will not be published. Required fields are marked *

Related Articles

ಶಬರಿಮಲೆ ಅಯ್ಯಪ್ಪ ಬ್ರಹ್ಮಚಾರಿ; ಅಗತ್ಯ ಧಾರ್ಮಿಕ ನಿರ್ಬಂಧ ಎತ್ತಿ ಹಿಡಿಯಬಹುದು: ಸುಪ್ರೀಂ ಕೋರ್ಟ್ ನಲ್ಲಿ ದೇವಾಲಯದ ಪರ ವಕೀಲರ ವಾದ

“ನವದೆಹಲಿ: ಸುಪ್ರೀಂ ಕೋರ್ಟ್ ಮಂಗಳವಾರ ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕರನ್ನು, ಜನ್ಮ ಅಥವಾ ಸ್ಥಾನಮಾನದ...

ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂಕ 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಸಚಿವ ಮಧು ಬಂಗಾರಪ್ಪ

“ಬೆಂಗಳೂರು: SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ...

ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷದಲ್ಲಿ ಅವರಿಗೆ ನೀಡುವ ಗೌರವ :: ಏಕನಾಥ್ ಶಿಂಧೆ

ಇತ್ತೀಚಿಗೆ ನಡೆದ ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಹಾಯುತಿಯಲ್ಲಿ ಈಗ...

ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ

ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ...