ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಪ್ರಾರಂಭ ಮಾರ್ಚ್ 7 ಬಜೆಟ್ ಮಂಡನೆ

41

ನಾಳೆ ಸೋಮವಾರದಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾ.21ರ ತನಕ ನಡೆಯಲಿದೆ.

ನಾಳೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯಲಿವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಇತ್ತೀಚೆಗೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು.

ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದ್ದಾರೆ.

ರ್ಯಾಂಪ್ ವ್ಯವಸ್ಥೆ ಈ ನಡುವೆ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ವಿಶೇಷ ರ್ಯಾಂಪ್‌ ಸಿದ್ದಗೊಳ್ಳುತ್ತಿದೆ. ಕಳೆದ ಅನೇಕ ದಿನಗಳಿಂದ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿದ್ದಾರೆ.

ವೈದ್ಯರು ಆರು ವಾರಗಳ ವಿಶ್ರಾಂತಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಅವರಿಗೆ ನಡೆದಾಡಲು ಸಾಧ್ಯವಾಗುತ್ತಿಲ್ಲ.

ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ 16 ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಅವರಿಗೆ ವಿಧಾನಸೌಧದಕ್ಕೆ ಆಗಮಿಸಲು ಅನುಕೂಲ ಆಗಲಿ ಎಂದು ರ್ಯಾಂಪ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಸಿದ್ದರಾಮಯ್ಯನವರು ಈ ಬಾರಿ ಕುಳಿತುಕೊಂಡು ಬಜೆಟ್ ಪ್ರತಿ ಓದುವ ಸಾಧ್ಯತೆಯಿದೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...