ಮಹಾರಾಷ್ಟ್ರಸಚಿವರ ತಲೆದಂಡ ಹತ್ಯೆ ಪ್ರಕರಣ ಸಂಬಂಧ ಸಚಿವ ಧನಂಜಯ್ ಮುಂಡೆ ರಾಜೀನಾಮೆ

44

“ಸರಪಂಚ್‌ ಸಂತೋಷ್‌ ದೇಶಮುಖ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ತ ಸಹಾಯಕನ ಬಂಧನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ  ನೀಡಿದ್ದಾರೆ.

ಎನ್‌ಸಿಪಿಯ ಅಜಿತ್‌ ಪವಾರ್‌ ಬಣದ ನಾಯಕರಾಗಿರುವ ಧನಂಜಯ ಅವರು ಪ್ರಸ್ತುತ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು.

ಧನಂಜಯ ಅವರ ಆಪ್ತ ವಾಲ್ಮಿಕ್‌ ಕರಾಡ್‌ ಸರಪಂಚ್‌ ಸಂತೋಷ್‌ ದೇಶಮುಖ್‌ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಗಿರುವುದರಿಂದ ರಾಜಿನಾಮೆ ನೀಡುವಂತೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚಿಸಿದ್ದರು ಎನ್ನಲಾಗಿದೆ.

ಸಂತೋಷ್‌ ದೇಶ್‌ಮುಖ್‌ ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಎಂದು ಉಲ್ಲೇಖಿಸಿ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಧನಂಜಯ ಮುಂಡೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿದ್ದವು.

ಬೀಡ್‌ನ ಮಸ್ಸಾಜೋಗ್ ಗ್ರಾಮದ ಸರಪಂಚ್‌ ಆಗಿದ್ದ ಸಂತೋಷ್ ದೇಶಮುಖ್‌ ಅವರನ್ನು ಕಳೆದ ವರ್ಷ ಡಿಸೆಂಬರ್ 6ರಂದು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು.

ಪ್ರಕರಣ ಸಂಬಂಧ ಬೀಡ್‌ ಜಿಲ್ಲಾ ನ್ಯಾಯಾಲಯಕ್ಕೆ 1,200 ಪುಟಗಳ ದೋಷಾರೋಪಪಟ್ಟಿ ಸಲ್ಲಿಸಿದ್ದ ಸಿಐಡಿ, ವಾಲ್ಮಿಕ್‌ ಕರಾಡ್‌ನನ್ನು ಪ್ರಮುಖ ಆರೋಪಿ ಎಂದು ಹೆಸರಿಸಿತ್ತು.

ದೇಶಮುಖ್‌ ಹತ್ಯೆ ಪ್ರಕರಣದಲ್ಲಿ ಸಿಐಡಿ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಸಚಿವರ ಆಪ್ತ ಸಹಾಯಕ ವಾಲಿಕ್‌ಕರದ್‌ ಆರೋಪಿಯನ್ನಾಗಿ ಹೆಸರಿಸಿರುವ ಕಾರಣ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಕಳೆದ ರಾತ್ರಿ ಫಡ್ನವೀಸ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಂತರ ಈ ಬೆಳವಣಿಗೆ ನಡೆದಿದೆ.


ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುಂಡೆ ಅವರು ಬೀಡ್‌ ಜಿಲ್ಲೆಯ ಪಾರ್ಲಿಯ ಕ್ಷೇತ್ರದ ಎನ್‌ಸಿಪಿ ಶಾಸಕರಾಗಿದ್ದಾರೆ. ಅವರು ಈ ಹಿಂದೆ ಬೀಡ್‌ನ ಉಸ್ತುವಾರಿ ಸಚಿವರಾಗಿದ್ದರು.”

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...