ಬಂಡೀಪುರ ಖಾಸಗಿ ವಸತಿ ಗ್ರಹದಲ್ಲಿ ವಾಸ್ತವ್ಯ ಮಾಡಿದ್ದ ಮಗು ಸೇರಿ ದಂಪತಿಗಳನ್ನು ಅಪಹರಿಸಿದ ದುಷ್ಕರ್ಮಿಗಳು

32

“ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಸೋಮವಾರ ನಡೆದಿದೆ.

ನಿಶಾಂತ್ ಮತ್ತು ಚಂದನ ದಂಪತಿಗಳು ತಮ್ಮ ಮಗುವಿನೊಂದಿಗೆ ಭಾನುವಾರ ರಾತ್ರಿ ಬಂಡೀಪುರ ಸಮೀಪದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು.


ಸೋಮವಾರ ದಂಪತಿ ಹಾಗೂ ಮಗು ರೆಸಾರ್ಟ್ ನಿಂದ ಹೊರ ಬಂದ ವೇಳೆ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಮೂವರನ್ನು ಅಪಹರಿಸಿದ್ದಾರೆಂದು ತಿಳಿದುಬಂದಿದೆ. ಬಳಿಕ ರೆಸಾರ್ಟ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು,

ಸ್ಥಳಕ್ಕೆ ಬಂದ ಡಿವೈಎಸ್‌ಪಿ ಲಕ್ಷ್ಮಯ್ಯ ನೇತೃತ್ವದ ಪೊಲೀಸ್ ತಂಡ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕಿತು. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರೀಶೀಲನೆ ನಡೆಸಿತು.

ಘಟನೆಯ ಕುರಿತು ಮಾತನಾಡಿದ ಎಸ್‌ಪಿ ಬಿ.ಟಿ. ಕವಿತಾ, ಸೋಮವಾರ ಮಧ್ಯಾಹ್ನ 1 ಗಂಟೆಗೆ ಘಟನೆಗೆ ಈ ಬಗ್ಗೆ ರೆಸಾರ್ಟ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಎರಡು ವಾಹನಗಳಲ್ಲಿ ಬಂದ ದುಷ್ಕರ್ಮಿಗಳು ಪತಿ, ಪತ್ನಿ ಮತ್ತು ಮಗುವನ್ನು ಕರೆದುಕೊಂಡು ಹೋಗಿದ್ದಾರೆಂದು ಹೇಳಿದರು.

ಸಂಬಂಧಿಕರು ಅವರನ್ನು ಕರೆದುಕೊಂಡು ಹೋಗಿದ್ದಾರೋ ಅಥವಾ ಬೇರೆ ಯಾರಾದರೂ ಕರೆದುಕೊಂಡು ಹೋಗಿದ್ದಾರೋ ಎಂಬುದು ತಿಳಿದಿಲ್ಲ.

ಅವರನ್ನು ಯಾರು ಕರೆದುಕೊಂಡು ಹೋದರು ಎಂಬುದರ ಬಗ್ಗೆ ರೆಸಾರ್ಟ್‌ಗೂ ಯಾವುದೇ ಮಾಹಿತಿ ಇಲ್ಲ. ಅದು ಅಪಹರಣವಾಗಿದ್ದರೆ, ಪ್ರತಿರೋಧ ಎದುರಾಗುತ್ತಿತ್ತು. ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...