ಐಸಿಸಿ ಚಾಂಪಿಯನ್ ಟ್ರೋಫಿ ಫೈನಲ್ ಗೇರಿದ ಭಾರತ ತಂಡಕ್ಕೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ

34
ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್ ಗೇರಿರುವ ಭಾರತ ತಂಡಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.


ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಮೊದಲ ಸೆಮಿಫೈನಲ್ ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿ ಟೂರ್ನಿಯ ಫೈನಲ್ ಗೇರಿತು.

ಭಾರತ ತಂಡದ ಸಾಧನೆಗೆ ದೇಶದ ಗಣ್ಯರು ಶುಭ ಕೋರಿದ್ದು, ಫೈನಲ್ ಪಂದ್ಯ ಕೂಡ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘#TeamIndia ದಿಂದ  ಮತ್ತೊಂದು ಅದ್ಭುತ ಗೆಲುವು! ಕೌಶಲ್ಯ, ದೃಢನಿಶ್ಚಯ ಮತ್ತು ತಂಡದ ಕೆಲಸದ ನಿಜವಾದ ಪ್ರದರ್ಶನ.

ರೋಹಿತ್ ಅವರ ಅದ್ಭುತ ನಾಯಕತ್ವದಲ್ಲಿ, ವಿರಾಟ್ ಕೊಹ್ಲಿ ತಮ್ಮ ವಿಶಿಷ್ಟ ಪ್ರತಿಭೆಯನ್ನು ಸೇರಿಸಿದ್ದಾರೆ. ಈ ಅದ್ಭುತ ಸಾಧನೆಯ ಬಗ್ಗೆ ಇಡೀ ರಾಷ್ಟ್ರ ಹೆಮ್ಮೆಪಡುತ್ತದೆ. ವೈಭವದಿಂದ ಒಂದು ಹೆಜ್ಜೆ ದೂರದಲ್ಲಿ – ಟ್ರೋಫಿಯನ್ನು ಮನೆಗೆ ತನ್ನಿ, ಹುಡುಗರೇ ಎಂದು ಟ್ವೀಟ್ ಮಾಡಿದ್ದಾರೆ

ಡಿಸಿಎಂ ಡಿಕೆ ಶಿವಕುಮಾರ್ ಕೂಡ ಟ್ವೀಟ್ ಮಾಡಿದ್ದು, ‘ನಮ್ಮ ಅದ್ಭುತ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಗೆಲುವಿನೊಂದಿಗೆ ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್‌ಗೆ ಲಗ್ಗೆ ಇಟ್ಟಿದೆ!

ಈ ಸಮಗ್ರ ಗೆಲುವಿಗಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು, ಮತ್ತು ಫೈನಲ್‌ಗೆ ನಿಮಗೆ ಶುಭ ಹಾರೈಸುತ್ತೇನೆ! ಎಂದು ಟ್ವೀಟ್ ಮಾಡಿದ್ದಾರೆ

ಇಷ್ಟೇ ಅಲ್ಲದೆ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಂಸದ ಡಿಕೆ ಸುರೇಶ್, ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ, ಸಚಿವ ಸಂತೋಷ್ ಲಾಡ್,

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಮಾಜಿ ಸಂಸದ ಪ್ರತಾಪ್ ಸಿಂಹ, ಕೇಂದ್ರ ಸಚಿವ ಪಿಯೂಷ್ ಗೋಯಲ್, ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವರು ಟ್ವೀಟ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಶುಭ ಕೋರಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊಲಂಬೊದಲ್ಲಿ  ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

2026ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊಲಂಬೊದಲ್ಲಿ ನಡೆಯುವ ನಿರ್ಣಾಯಕ ಪಂದ್ಯಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು,...

ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಪಾಕಿಸ್ತಾನಕ್ಕೆ ಐಸಿಸಿ ಎಚ್ಚರಿಕೆ ಬಾಲ ಮುದುರಿಕೊಂಡ ಪಾಕಿಸ್ತಾನ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿರುವ ಮಾತುಗಳನ್ನಾಡುತ್ತಿದ್ದ ಪಾಕಿಸ್ತಾನದ ಬಾಲ ಮುದುರಿಕೊಂಡಂತೆ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಿಕ ಪಂದ್ಯದಲ್ಲೇ ಭಾರತ ತಂಡಕ್ಕೆ ಭರ್ಜರಿ ಜಯದೊಂದಿಗೆ  ಟೂರ್ನಿಯಲ್ಲಿ ಶುಭಾರಂಭ

“ಮುಂಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲೇ ಭಾರತ ತಂಡ ಭರ್ಜರಿ ಜಯ ಸಾಧಿಸುವ...

6ನೇ ಬಾರಿಗೆಅಂಡರ್ 19 ವರ್ಲ್ಡ್ ಕಪ್ ಗೆದ್ದ ಭಾರತೀಯ ಯುವ ತಂಡ

ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ...