ವಿಧಾನಸಭೆ ಅಧಿವೇಶನದಲ್ಲಿ ಐದು ಹೊಸ ಮಸೂದೆಗಳನ್ನು ಮಂಡಿಸಿದ ರಾಜ್ಯ ಸರಕಾರ

2

ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.

ಬಳ್ಳಾರಿ ಮತ್ತು ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಜಾಗ ಸ್ವಾಧೀನಕ್ಕೆ ಬದಲಾಗಿ ಮೈಸೂರು ರಾಜ ಮನೆತದ ವಾರಸುದಾರರಿಗೆ ರೂ.3014 ಕೋಟಿ ವರ್ಗಾವಣೆ ಅಭಿವೃದ್ಧಿ ಹಕ್ಕುಗಳನ್ನು (ಟಿಡಿಆರ್) ಪರಿಹಾರ ನೀಡಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

ಈ ಹಿನ್ನೆಲೆಯಲ್ಲಿ ಸರ್ಕಾರದ ಈ ಮಸೂದೆ ಮಹತ್ವ ಪಡೆದುಕೊಂಡಿದೆ. ಸುಪ್ರೀಂಕೋರ್ಟ್ ಆದೇಶ ಪಾಲೆ ಮಾಡಿದರೆ ಸರ್ಕಾರಕ್ಕೆ ಭಾರೀ ನಷ್ಟ ಉಂಟಾಗಲಿದೆ ಎಂದು ಸರ್ಕಾರ ನಿರ್ಧರಿಸಿದ್ದು, ಹೀಗಾಗಿಯೇ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಆದರೆ, ಸುಪ್ರೀಂಕೋರ್ಟ್ ಅದನ್ನು ಒಪ್ಪದೆ ಟಿಡಿಆರ್ ಪರಿಹಾರ ನೀಡುವ ಆದೇಶ ಪಾಲಿಸುವಂತೆ ಸೂಚನೆ ನೀಡಿತ್ತು

. ಅದರ ನಡುವೆಯೂ ಇದೀಗ ಸುಗ್ರೀವಾಜ್ಞೆಗೆ ಕಾನೂನು ರೂಪ ನೀಡಲು ಸರ್ಕಾರ ಮುಂದಾಗಿದ್ದು, ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025 ಅನ್ನು ಮಂಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ನಿನ್ನೆ ವಿಧಾನಮಂಡಲದಲ್ಲಿ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ವನ್ನು ಮಂಡನೆ ಮಾಡಿದ್ದಾರೆ.

ಈ ವಿಧೆಯಕವು 1996ರ ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆಗೆ ಪೂರಕವಾಗಿದೆ. ಹಿಂದಿನ ವಿಧೇಯಕವು ಬೆಂಗಳೂರು ಅರಮನೆಯ 472.16 ಎಕರೆ ಭೂಮಿಯನ್ನು ರೂ.11 ಕೋಟಿ ಎಂದು ನಿಗದಿ ಮಾಡಲಾಗಿದೆ. ಅದರಂತೆ ಪರಿಹಾರ ನೀಡಬಹುದಾಗಿದೆ

. ಆದರೆ, ರಸ್ತೆ ಅಗಲೀಕರಣಕ್ಕಾಗಿ ಮಾಡಿಕೊಳ್ಳಲಾಗುವ 15.39 ಎಕರೆ ಅರಮನೆ ಮೈದಾನದ ಭೂಮಿಗೆ ಕರ್ನಾಟಕ ಸ್ಟಾಂಪು ಅಧಿನಿಯಮ 1957ರ 45ಬಿ ಪ್ರಕರಣದ ಪ್ರಕಾರ ಅಕ್ಕಪಕ್ಕದ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯದಂತೆ ಟಿಡಿಆರ್ ನೀಡಬೇಕು ಎಂದು ಆದೇಶಿಸಿದೆ.

ಸರ್ವೋಚ್ಛ ನ್ಯಾಯಾಲಯದ ಆದೇಶದಿಂದ ಸಂಕೀರ್ಣ ಪರಿಣಾಮಗಳು ಬೀರಲಿವೆ. ಅದನ್ನು ತಪ್ಪಿಸುವ ಉದ್ದೇಶದೊಂದಿಗೆ ನೂತನ ವಿಧೇಯಕ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ದ ಜೊತೆಗೆ ಸರ್ಕಾರ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಗಿರವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಮಸೂದೆ 2025,

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಮಸೂದೆ 2025ನ್ನು ಮಂಡಿಸಿದೆ.

ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಮಸೂದೆ 2025 ಮಸೂದೆಯು ಆರ್ಥಿಕವಾಗಿ ದುರ್ಬಲವಾಗಿರುವವರನ್ನು ಹೆಚ್ಚಿನ ಬಡ್ಡಿ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ರಕ್ಷಿಸುವ ಉದ್ದೇಶವನ್ನು ಹೊಂದಿದೆ.

ಕರ್ನಾಟಕ ಗಿರವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಮಸೂದೆ 2025 ಕೂಡ ಇದೇ ಉದ್ದೇಶವನ್ನು ಹೊಂದಿದೆ. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ)

ಮಸೂದೆ 2025ಯನ್ನು ಮಾರುಕಟ್ಟೆ ಸಮಿತಿಯ ಅಧಿಕಾರ ವ್ಯಾಪ್ತಿಯನ್ನು ಮಾರುಕಟ್ಟೆ, ಉಪ-ಮಾರುಕಟ್ಟೆ ಪ್ರದೇಶಕ್ಕೆ ವಿಸ್ತರಿಸಲು, ಗೋದಾಮಿನ ಸೇವಾ ಪೂರೈಕೆದಾರರ ಜವಾಬ್ದಾರಿಯನ್ನು ನಿಗದಿಪಡಿಸಲು ಮತ್ತು ಇ-ಕಾಮರ್ಸ್ ವೇದಿಕೆಗಳನ್ನು ಸ್ಥಾಪಿಸಲು ಪರಿಚಯಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...