ಐ ಪಿ ಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗಾವಣೆ ಬೆನ್ನಲೇ ಐ ಪಿ ಎಸ್ ಡಿ ರೂಪ ವರ್ಗಾವಣೆ ಮಾಡಿದ ಸರಕಾರ

64

“ಕಳೆದ ಸೋಮವಾರ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಬುಧವಾರ ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.


ಡಿ ರೂಪಾ ಅವರ ವಿರುದ್ಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಿಖಿತ ದೂರು ನೀಡಿದ್ದ ವರ್ತಿಕಾ ಕಟಿಯಾರ್ ಅವರನ್ನು ಸೋಮವಾರ ವರ್ಗಾವಣೆ ಮಾಡಲಾಗಿತ್ತು

. ಇದೀಗ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದ ಡಿ ರೂಪಾ ಅವರನ್ನು ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಕಳೆದ ತಿಂಗಳು, ವರ್ತಿಕಾ ಕಟಿಯಾರ್ ಅವರು 2000 ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಿ ರೂಪಾ ಅವರ ವಿರುದ್ಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಿಖಿತ ದೂರು ನೀಡಿದ್ದರು.

ರೂಪಾ ಅವರು ತಮ್ಮ ಅನುಪಸ್ಥಿತಿಯಲ್ಲಿ ಇಬ್ಬರು ಕಿರಿಯ ಪೊಲೀಸ್ ಅಧಿಕಾರಿಗಳ ಮೂಲಕ ನಿಯಂತ್ರಣ ಕೊಠಡಿಯಿಂದ ಕೀ ತೆಗೆದುಕೊಂಡು ತಮ್ಮ ಕಚೇರಿ ಪ್ರವೇಶಿಸಿದ್ದಾರೆ ಎಂದು ಆರೋಪಿಸಿದ್ದರು.

ಡಿ ರೂಪಾ ವಿರುದ್ಧ ದೂರು ನೀಡಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗಾವಣೆ ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿತ್ತು.

ದೂರು ನೀಡಿದವರನ್ನೇ ವರ್ಗಾವಣೆ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೀಗ ರೂಪ ಅವರನ್ನೂ ಸಹ ಸರ್ಕಾರ ವರ್ಗಾವಣೆ ಮಾಡಿದ್ದು, ಇಬ್ಬರನ್ನೂ ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...