ಮಹಾರಾಷ್ಟ್ರಔರಂಗಜೇಬ್ ನನ್ನು ಹೊಗಳಿ ಟೀಕೆ ಗುರಿಯಾಗಿದ್ದ ಎಸ್ ಪಿ ಶಾಸಕ ಅಬು ಅಜ್ಮಿ ಗೆ ಬಜೆಟ್ ಅಧಿವೇಶನ ಮುಗಿಯುವ ವರೆಗೂ ಅಮಾನತು

2

“ಔರಂಗಜೇಬನನ್ನು ಹೊಗಳಿ ತೀವ್ರ ಟೀಕೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರನ್ನು ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಿಂದ ಬುಧವಾರ ಅಮಾನತುಗೊಳಿಸಲಾಗಿದೆ.

ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಮುಗಿಯುವವರೆಗೂ ಅಬು ಅಜ್ಮಿ ಅವರನ್ನು ಅಮಾನತು ಮಾಡಲಾಗಿದೆ.

ವಿಧಾನಸಭೆಯ ಬಜೆಟ್ ಅಧಿವೇಶನ ಮಾರ್ಚ್ 26ರ ವರೆಗೆ ನಡೆಯಲಿದೆ. ಅಲ್ಲಿಯವರೆಗೂ ಅಬು ಅಜ್ನಿ ಅಮಾನತಿನಲ್ಲಿ ಇರಲಿದ್ದಾರೆ

. ಸಚಿವ ಚಂದ್ರಕಾಂತ್ ಪಾಟೀಲ್ ಅವರು ಇಂದು ಸದನದಲ್ಲಿ ಅಬು ಅಜ್ಮಿ ಅವರನ್ನು ಸದನದಿಂದ ಅಮಾನತು ಮಾಡುವ ಪ್ರಸ್ತಾವನೆ ಮಂಡಿಸಿದರು. ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು. ಬಳಿಕ ಎಸ್ಪಿ ಶಾಸಕ ಸದನದಿಂದ ಅಮಾನತಾಗಿದ್ದಾಗಿ ಸ್ಪೀಕರ್ ತಿಳಿಸಿದರು.

ಹಿಂದುಗಳ ವಿರೋಧಿ ಮತ್ತು ಕ್ರೂರ ಆಡಳಿತಗಾರ ಔರಂಗಜೇಬನನ್ನು ಎಸ್ಪಿ ಶಾಸಕ ಹೊಗಳುವ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಅವರ ಪುತ್ರ ಛತ್ರಪತಿ ಸಂಭಾಜಿ ಮಹಾರಾಜ್ ಅವರನ್ನು ಅವಮಾನಿಸಲಾಗಿದೆ ಎಂದು ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಟೀಕಾಪ್ರಹಾರ ನಡೆಸಿದರು.

“ನನ್ನ ಮಾತುಗಳನ್ನು ತಿರುಚಲಾಗಿದೆ. ಇತಿಹಾಸಕಾರರು ಮತ್ತು ಬರಹಗಾರರು ಹೇಳಿದ್ದನ್ನು ನಾನು ಹೇಳಿದ್ದೇನೆ. ನಾನು ಛತ್ರಪತಿ ಶಿವಾಜಿ ಮಹಾರಾಜ್, ಸಂಭಾಜಿ ಮಹಾರಾಜ್ ಅಥವಾ ಇತರ ಯಾವುದೇ ಮಹಾನ್ ವ್ಯಕ್ತಿಗಳ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆ ನೀಡಿಲ್ಲ – ಆದರೆ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ,

ನಾನು ನನ್ನ ಮಾತುಗಳನ್ನು, ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ. ಈ ವಿಷಯವನ್ನು ರಾಜಕೀಯ ವಿಷಯವನ್ನಾಗಿ ಮಾಡಲಾಗುತ್ತಿದೆ ಎಂದು ನಿನ್ನೆ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಹೇಳಿದ್ದರು. “

ಔರಂಗಜೇಬನ ಆಳ್ವಿಕೆಯಲ್ಲಿ ಭಾರತದ ಗಡಿ ಅಫ್ಘಾನಿಸ್ತಾನ ಮತ್ತು ಬರ್ಮಾವರೆಗೂ(ಮ್ಯಾನ್ಮಾರ್) ವ್ಯಾಪಿಸಿತ್ತು. ವಿಶ್ವದ ಜಿಡಿಪಿಯಲ್ಲಿ ದೇಶದ ಜಿಡಿಪಿಯು ಶೇಕಡಾ 24 ರಷ್ಟಿತ್ತು. ಭಾರತವನ್ನು ಆತನ ಆಡಳಿತದಲ್ಲಿ ‘ಚಿನ್ನದ ಗುಬ್ಬಚ್ಚಿ’ ಎಂದು ಕರೆಯಲಾಗುತ್ತಿತ್ತು” ಎಂದು ಅಬು ಅಜ್ಮಿ ಹೇಳಿದ್ದರು.

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...