ಆಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ನಟಿ ರನ್ಯಾ ರಾವ್ ಳಿಂದ 17 ಕೋಟಿ ಆಭರಣ ಹಾಗೂ ನಗದು ಜಪ್ತಿ

37

“ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಪ್ರತಿ ದುಬೈ ಟ್ರಿಪ್‌ಗೆ ಸುಮಾರು 12 ಲಕ್ಷ ರೂಪಾಯಿ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ನಟಿ ರನ್ಯಾ ರಾವ್ 15 ದಿನಗಳಲ್ಲಿ ನಾಲ್ಕು ಬಾರಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ ಮತ್ತು ಕಳೆದ ಒಂದು ವರ್ಷದಲ್ಲಿ ಸೌದಿ ನಗರಕ್ಕೆ 30 ಬಾರಿ ಪ್ರಯಾಣಿಸಿದ್ದಾರೆ.

ಪ್ರತಿ ಪ್ರವಾಸದಲ್ಲೂ ಅವರು ಚಿನ್ನವನ್ನು ಸಾಗಿಸುತ್ತಿದ್ದರು ಎಂದು ವರದಿಯಾಗಿದೆ. ಪ್ರಕರಣದ ತನಿಖೆಯ ಸಮಯದಲ್ಲಿ ರನ್ಯಾ ರಾವ್‌ಗೆ ಪ್ರತಿ ಬಾರಿ ಚಿನ್ನ ಕಳ್ಳಸಾಗಣೆ ಮಾಡಲು 12 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ವರದಿಯಾಗಿದೆ.

ದುಬೈನ ಖಾಸಗಿ ಹೋಟೆಲ್ ಶೌಚಾಲಯದಲ್ಲಿ ನಟಿಗೆ ವ್ಯಕ್ತಿಯೊಬ್ಬ ಚಿನ್ನ ನೀಡುತ್ತಿದ್ದರು ಎನ್ನಲಾಗಿದ್ದು, ಪ್ರತಿ ಬಾರಿಯೂ ಚಿನ್ನದ ಗಟ್ಟಿಯನ್ನು ತನ್ನ ಸೊಂಟ ಹಾಗೂ ಹೊಟ್ಟೆ ಭಾಗದಲ್ಲಿ ಇಟ್ಟುಕೊಂಡು ಟೇಪ್ ಸುತ್ತಿಕೊಳ್ಳುತ್ತಿದ್ದಳು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲಮಗಳಾಗಿರುವ ರನ್ಯಾ ರಾವ್ 12 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಮಾರ್ಚ್‌ 3 ರಂದು ಬೆಂಗಳೂರಿನ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಮತ್ತು ನಟಿಯಿಂದ ಈಗಾಗಲೇ 17 ಕೋಟಿ ಬೆಲೆಬಾಳುವ ಆಭರಣ ಹಾಗೂ ನಗದನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...