ರಾಜ್ಯಬಜೆಟ್ 4,09,549ಕೋಟಿ ರೂ ಗಾತ್ರದ ಬಜೆಟ್ ಮಂಡನೆ ಬಿಸಿಯೂಟ ಕಾರ್ಯಕರ್ತೆಯರಿಗೆ 1ಸಾವಿರ ಗೌರವಧನ ಹೆಚ್ಚಳ

3

4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ 2025-26 ಸಾಲಿನಲ್ಲಿ ಪಂಚ ಗ್ಯಾರಂಟಿಗೆ 51,034 ಕೋಟಿ ರೂ‌. ಅನುದಾನ ಬಂಡವಾಳ ವೆಚ್ಚ 26,474 ಕೋಟಿ ರೂ. ರಾಜಸ್ವ ವೆಚ್ಚ ಅಂದಾಜು 3,11,739 ಕೋಟಿ ರೂ. 19,262 ಕೋಟಿ ರೂ. ರಾಜಸ್ವ ಕೊರತೆಯ ಬಜೆಟ್ ಮಂಡನೆ 1,16,000 ಕೋಟಿ ರೂ. ಸಾಲದ ಮೊರೆ ಒಟ್ಟು ರಾಜಸ್ವ ಸ್ವೀಕೃತಿ ಅಂದಾಜು 2,92,477 ಕೋಟಿ ರೂ. ಈ ಪೈಕಿ 2,08,100 ಕೋಟಿ ಸ್ವಂತ ತೆರಿಗೆ ಸಂಗ್ರಹದ ಗುರಿ

ಬ್ರ್ಯಾಂಡ್ ಬೆಂಗಳೂರು ನಗರಾಭಿವೃದ್ಧಿ, ಕೃಷಿ, ಶಿಕ್ಷಣಕ್ಕೆ ಬಜೆಟ್ನಲ್ಲಿ ಆದ್ಯತೆ. ಜೊತೆಗೆ ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಬೆಂಗಳೂರಿಗೆ ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಬಜೆಟ್ನಲ್ಲಿ 5 ಗ್ಯಾರಂಟಿ ಯೋಜನೆಗಳ ಜೊತೆಗೆ 6 ಅಭಿವೃದ್ಧಿ ಆಯಾಮ ಗುರುತಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ. ಜೊತೆಗೆ ಗ್ರಾಮೀಣ ಅಭಿವೃದ್ಧಿಯೆ ಒತ್ತು ನೀಡುತ್ತೇವೆ

. ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ಅನುದಾನ. 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಗೆ 440 ಕೋಟಿ ರೂ. ಸಹಾಯ ಧನ ನೀಡಲಾಗುವುದು. ಎಲ್ಲಾ ವಿಧಾನಸಬಾ ಕ್ಷೇತ್ರಗಳಲ್ಲಿ ರಸ್ತೆ ಅಭಿವೃದ್ಧಿಗೆ ₹8 ಸಾವಿರ ಕೋಟಿ ಮೀಸಲು.

ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಪ್ರಸಕ್ತ ಸಾಲನ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದು, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನೂ 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.

ಇದೇ ವೇಳೆ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ರೂ. ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.

  ಟನಲ್‌ ಯೋಜನೆಗೆ 40 ಸಾವಿರ ಕೋಟಿ ರೂ. ಘೋಷಣೆ ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಅಭಿವೃದ್ಧಿಗೆ ಬದ್ಧವಾಗಿದ್ದು, 2030ರ ವೇಳೆಗೆ 20 ಲಕ್ಷ ಉದ್ಯೋಗ ಸೃಜಿಸುವ ಗುರಿ ಹೊಂದಿದೆ.

ಸರ್ಕಾರದ ವಿವಿಧ ಫಲಾನುಭವಿಗಳಿಗೆ ಮಧ್ಯವರ್ತಿಗಳಿಲ್ಲದೆ 1 ಲಕ್ಷ ಕೋಟಿ ರೂ.ಹಣವನ್ನು ವರ್ಗಾಯಿಸಲಾಗಿದೆ. ಕಲ್ಯಾಣ ಇಲಾಖೆಗಳ ಮೂಲಕ ಅಸಾಹಯಕರನ್ನು ಬಲಗೊಳಿಸಲು ಈ ಆಯವ್ಯಯವೂ ನೆರವಾಗಲಿದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರಯಾಗ್ ರಾಜ್ ಕುಂಭಮೇಳ 45 ದಿನಗಳಲ್ಲಿ 130 ದೋಣಿಗಳಿಂದ  30 ಕೋಟಿಗೂ ಅಧಿಕ ಸಂಪಾದನೆ ಮಾಡಿದ ನಾವಿಕ ಕುಟುಂಬ

“45 ದಿನಗಳ ಕಾಲ ನಡೆದ ಈ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಉತ್ತರ ಪ್ರದೇಶದ ಆರ್ಥಿಕತೆಗೆ ದೊಡ್ಡ...