“ವಕ್ಫ್ ಆಸ್ತಿ ಅಕ್ರಮದಲ್ಲಿ ಹಾಲಿ, ಮಾಜಿ ಸಚಿವರೂ ಭಾಗಿ ಸಂಬಂಧಿಸಿದ ದಾಖಲೆಗಳಿವೆ ಬಿಜೆಪಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್

35

“ವಕ್ಫ್ ಆಸ್ತಿ ಅಕ್ರಮದಲ್ಲಿ ಹಾಲಿ, ಮಾಜಿ ಸಚಿವರೂ ಭಾಗಿಯಾಗಿದ್ದು ಇದಕ್ಕೆ ಸಂಬಂಧಿಸಿದ ದಾಖಲೆಗಳೂ ಇವೆ

ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ತಂದಿರುವ ದಾಖಲೆಗಳು ಲೋಕಾಯುಕ್ತಕ್ಕೆ ರಾಜ್ಯ ಸರ್ಕಾರ ಕೊಟ್ಟಿದ್ದು.

ವಕ್ಫ್ ಆಸ್ತಿಗಳ ತನಿಖೆಗೆ ಸರ್ಕಾರವು ಜಸ್ಟೀಸ್ ಎನ್. ಆನಂದ್ ಸಮಿತಿಯನ್ನು ಸರ್ಕಾರ ರಚಿಸಿತ್ತು.

ಅದರಂತೆ ತನಿಖೆ ನಡೆಸಿ ಒಟ್ಟು 40 ಸಾವಿರ ಪುಟಗಳ ದಾಖಲೆಯನ್ನು ಸಮಿತಿ ಸರ್ಕಾರಕ್ಕೆ ಕೊಟ್ಟಿತ್ತು ಎಂದು ಲೇಹರ್ ಸಿಂಗ್ ಹೇಳಿದ್ದಾರೆ.

ಪ್ರತಿ ಜಿಲ್ಲೆಗಳಲ್ಲಿ ಯಾವ್ಯಾವ ರೀತಿ ಹಗರಣ ಆಗಿದೆ ಎಂಬುದು ಈ ದಾಖಲೆಗಳಲ್ಲಿ ಇದೆ.

ಬಹಳ ದೊಡ್ಡ ದೊಡ್ಡ ರಾಜಕಾರಣಿಗಳ ಹೆಸರು ಕೂಡ ಈ ದಾಖಲೆಗಳಲ್ಲಿದೆ.

ಹಾಲಿ ಸಚಿವರು, ಮಾಜಿ ಸಚಿವರ ಹೆಸರುಗಳು ಕೂಡಾ ಈ ದಾಖಲೆಗಳಲ್ಲಿದೆ.

ನಾನು ಯಾವುದೇ ರಾಜಕಾರಣಿಗಳ ಹೆಸರು ಬಹಿರಂಗಪಡಿಸುವುದಿಲ್ಲ ಎಂದು ಲೆಹರ್ ಸಿಂಗ್ ಹೇಳಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...