ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಫೈನಲ್ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ – 2025 ಮುಡಿಗೇರಿಸಿಕೊಂಡ ಭಾರತ

3

“ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಬಗ್ಗುಬಡಿದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ. ರೋಚಕ ಪಂದ್ಯದಲ್ಲಿ ಕಿವೀಸ್ ತಂಡವನ್ನು 4 ವಿಕೆಟ ಗಳಿಂದ ಮಣಿಸಿದ ರೋಹಿತ್ ಪಡೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ.

ಆ ಮೂಲಕ 25 ವರ್ಷಗಳ ಹಿಂದಿನ ಫೈನಲ್ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಕಿವೀಸ್ ಬಳಗ ಮೊದಲು ಬ್ಯಾಟಿಂಗ್ ಮಾಡಿತು.

ನ್ಯೂಜಿಲೆಂಡ್ ತಂಡ 7 ವಿಕೆಟ್‌ ನಷ್ಟಕ್ಕೆ 251 ರನ್ ಕಲೆಹಾಕಿತು. ಈ ಗುರಿಯನ್ನು ಭಾರತ ಇನ್ನು 6 ಎಸೆತಗಳು ಬಾಕಿ ಇರುವಂತೆ 254 ರನ್ ಬಾರಿ ಗೆಲುವು ಸಾಧಿಸಿತು.

ಭಾರತ ಪರ ರೋಹಿತ್ ಶರ್ಮಾ 76, ಶುಭ್ಮನ್ ಗಿಲ್ 31, ವಿರಾಟ್ ಕೊಹ್ಲಿ 1, ಶ್ರೇಯಸ್ ಅಯ್ಯರ್ 48, ಅಕ್ಷರ್ ಪಟೇಲ್ 29, ಹಾರ್ದಿಕ್ ಪಾಂಡ್ಯ 18, ಕೆಎಲ್ ರಾಹುಲ್ ಅಜೇಯ 34 ಮತ್ತು ರವೀಂದ್ರ ಜಡೇಜಾ ಅಜೇಯ 9 ರನ್ ಪೇರಿಸಿದ್ದಾರೆ.

ಮೊದಲು ಬ್ಯಾಟಿಂಗ್ ಆರಂಭಿಸಿರುವ ಕಿವೀಸ್ ಪಡೆ ಭರ್ಜರಿ ಆರಂಭ ಪಡೆಯಿತು. ಕಿವೀಸ್ ಪರ ಆರಂಭಿಕರಾಗಿ ಕಣಕ್ಕಿಳಿದ ರಚಿನ್ ರವೀಂದ್ರ (37 ರನ್) ಮತ್ತು ವಿಲ್ ಯಂಗ್ (15 ರನ್) ಜೋಡಿ ಮೊದಲ ವಿಕೆಟ್ ಗೆ 57 ರನ್ ಗಳ ಭರ್ಜರಿ ಜೊತೆಯಾಟವಾಡಿತು.

ಆದರೆ ಈ ಹಂತದಲ್ಲಿ ದಾಳಿಗಿಳಿದ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ವಿಲ್ ಯಂಗ್ ರನ್ನು ಔಟ್ ಮಾಡಿ ಭಾರತಕ್ಕೆ ಮೊದಲ ಮುನ್ನಡೆ ತಂದಿತ್ತರು.

ಬಳಿಕ 37 ರನ್ ಗಳಿಸಿ ಅಪಾಯಕಾರಿಯಾಗುತ್ತಿದ್ದ ರಚಿನ್ ರವೀಂದ್ರ ಕುಲದೀಪ್ ಯಾದವ್ ರ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ಬಳಿಕ ಕೇನ್ ವಿಲಿಯಮ್ಸನ್ ಕೂಡ ಕುಲದೀಪ್ ಯಾದವ್ ಗೆ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಕ್ರೀಸ್ ಗೆ ಬಂದ ಡರಿಲ್ ಮೆಚೆಲ್ ಕಿವೀಸ್ ಬ್ಯಾಟಿಂಗ್ ಗೆ ಬಲ ತುಂಬಿದರು. 101 ಎಸೆತಗಳನ್ನು ಎದುರಿಸಿದ ಮಿಚೆಲ್ 3 ಬೌಂಡರಿ ಸಹಿತ 63 ರನ್ ಕಲೆಹಾಕಿದರು. ಅವರಿಗೆ ಟಾಮ್ ಲಾಥಮ್ (14 ರನ್) ಮತ್ತು ಗ್ಲೆನ್ ಫಿಲಿಪ್ಸ್ (34 ರನ್) ಉತ್ತಮ ಸಾಥ್ ನೀಡಿದರು.

ಬಳಿಕ ಕ್ರೀಸ್ ಗೆ ಬಂದ ಬ್ರೇಸ್ ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಕಿವೀಸ್ 250ರ ಗಡಿ ದಾಟುವಂತೆ ನೋಡಿಕೊಂಡರು. ಬ್ರೇಸ್ ವೆಲ್ ಕೇವಲ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 3 ಬೌಂಡರಿ ಸಹಿತ ಅಜೇಯ 53 ರನ್ ಗಳಿಸಿದರು.

ಅಂತಿಮವಾಗಿ ನ್ಯೂಜಿಲೆಂಡ್ ತಂಡ ನಿಗಧಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251ರನ್ ಕಲೆಹಾಕಿ ಭಾರತಕ್ಕೆ ಗೆಲಲ್ಲು 252ರನ್ ಗಳ ಸವಾಲಿನ ಗುರಿ ನೀಡಿತು.

ಇನ್ನು ಭಾರತದ ಪರ ವರುಣ್ ಚಕ್ರವರ್ತಿ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ, ಶಮಿ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.

2000ನೇ ಇಸವಿಯಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಮತ್ತು ಭಾರತ ಮುಖಾಮುಖಿಯಾಗಿತ್ತು.

ಈ ಪಂದ್ಯದಲ್ಲಿ ಭಾರತ 6 ವಿಕೆಟ್ ನಷ್ಟಕ್ಕೆ 264 ರನ್ ಪೇರಿಸಿತ್ತು. 265 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ಕೊನೆಯ ಓವರ್ ನಲ್ಲಿ 2 ಎಸೆತ ಬಾಕಿ ಇರುವಂತೆ 265 ರನ್ ಬಾರಿಸಿ ಪಂದ್ಯ ಗೆದ್ದಿತ್ತು.

Leave a comment

Leave a Reply

Your email address will not be published. Required fields are marked *

Related Articles

ಏಷ್ಯಾ ಕಪ್ ಕ್ರಿಕೆಟ್ ಗೆ ಟೀಂ ಇಂಡಿಯಾ ಬಹಿಷ್ಕಾರ ಏಷ್ಯಾಕಪ್ 2025 ರಿಂದ ಭಾರತ ತಂಡ ಹೊರಗುಳಿಯುವ ಸಾಧ್ಯತೆ

ನವದೆಹಲಿ: ಏಷ್ಯಾಕಪ್ ಟೂರ್ನಿಯ 17ನೇ ಆವೃತ್ತಿಗೆ ಸಿದ್ಧತೆಗಳು ಶುರುವಾಗಿರುವಂತೆಯೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ವಿರುದ್ಧ...

ಒಂಬತ್ತು ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಗೆ ಲಗ್ಗೆ

“ಮೊಹಾಲಿಯಲ್ಲಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ XI ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಸೇವೆಯಿಂದ ವಜಾಗೊಳಿಸಿದ ಬಿಸಿಸಿಐ

“ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿ ಸಂದರ್ಭದಲ್ಲಿ ಡ್ರೆಸ್ಸಿಂಗ್‌ ರೂಮ್‌ ಮಾಹಿತಿ...

ಐಸಿಸಿ ಚಾಂಪಿಯನ್ ಟ್ರೋಫಿ ಫೈನಲ್ ಗೇರಿದ ಭಾರತ ತಂಡಕ್ಕೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ

ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫೈನಲ್...