ಲೋಕಸಭಾ ಕ್ಷೇತ್ರಗಳ ಮರುವಿಂಗಡನೆ ವಿವಾದ ಸಮಾನ ಮನಸ್ಕರಾಜ್ಯಗಳ ಸಭೆಗೆ ರಾಜ್ಯದ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ :: ಸಿಎಂ  ಸಿದ್ದರಾಮಯ್ಯ

3

“ಲೋಕಸಭೆ ಕ್ಷೇತ್ರ ಮರುವಿಂಗಡನೆ ವಿವಾದದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ಗೆ ಪತ್ರವನ್ನು ಬರೆದಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಸ್ಟಾಲಿನ್ ಸೂಚನೆಯಂತೆ ತಮಿಳುನಾಡಿನ ಸಚಿವರು ಹಾಗೂ ಸಂಸದರೊಬ್ಬರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಸಂಸದೀಯ ಕ್ಷೇತ್ರಗಳ ಪ್ರಸ್ತಾವಿತ ವಿಂಗಡಣೆಯ ಪರಿಣಾಮಗಳನ್ನು ಚರ್ಚಿಸಲು ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿರುವ ಸಮಾನ ಮನಸ್ಕ ರಾಜ್ಯಗಳ ಮೊದಲ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕ್ಷೇತ್ರ ಮರುವಿಂಗಡನೆ ಕುರಿತಾಗಿ ನೀವು ಬರೆದ ಪತ್ರ ಮತ್ತು ಆಹ್ವಾನವನ್ನು ಸ್ವೀಕರಿಸಿದ್ದೇನೆ.


ಲೋಕಸಭಾ ಕ್ಷೇತ್ರಗಳ ಡಿಲಿಮಿಟೇಷನ್ ಕುರಿತು ದಕ್ಷಿಣ ರಾಜ್ಯಗಳ ಕಾಳಜಿ ಅರಿವಿದೆ. ಲೋಕಸಭಾ ಕ್ಷೇತ್ರಗಳ‌ ಮರುವಿಂಗಡಣೆ ಹಾಗೂ ಸಾಧಕ ಬಾದಕಗಳ ಬಗ್ಗೆ ಅರಿವಿದೆ. ಈ ವಿಚಾರವಾಗಿ‌ ಸುಧೀರ್ಘವಾಗಿ ಚರ್ಚಿಸುವ ಅಗತ್ಯವಿದೆ ಎಂದಿದ್ದಾರೆ.

ಸಮಾನ ಮನಸ್ಕ, ಸಂತ್ರಸ್ಥರಾಗುವ ರಾಜ್ಯಗಳ ಚರ್ಚಿಸಬೇಕು.‌ಈ ಸಭೆಯಲ್ಲಿ ನಾನು ಭಾಗವಹಿಸಬೇಕೆಂಬ ಆಸೆ ಇದೆ ಆದರೆ ಕೆಲವು ಕಾರಣಗಳಿಂದಾಗಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ವಿವರ ನೀಡಿದ್ದಾರೆ.

ಮಾರ್ಚ್ 22 ರಂದು ಕರೆದ ಸಭೆಯಲ್ಲಿ ನನ್ನ ಬದಲಾಗಿ ಡಿ.ಕೆ.ಶಿವಕುಮಾರ್‌ ಭಾಗವಹಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರ ಮರುವಿಂಗಡನೆ ಸಂಬಂಧಿಸಿದಂತೆ ಮಾರ್ಚ್ 22 ರಂದು ದಕ್ಷಿಣದ ರಾಜ್ಯಗಳ ಸಭೆ ನಡೆಯಲಿದೆ

. ಚೆನೈನಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಭೆಗೆ ಆಹ್ವಾನ ನೀಡಲು ತಮಿಳುನಾಡಿನ ಸಚಿವ ಮತ್ತು ಸಂಸದರು ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದರು. ಕ್ಷೇತ್ರ ಪುನರ್ ವಿಂಗಡನೆಗೆ ದಕ್ಷಿಣ ಭಾರತದ ರಾಜ್ಯಗಳಿಂದ‌ ತೀವ್ರ ವಿರೋಧ ವ್ಯಕ್ತವಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣದಿಂದ ಇದಕ್ಕೆ ವಿರೋಧ ವ್ಯಕ್ತಪಡಿಸಿವೆ.

Leave a comment

Leave a Reply

Your email address will not be published. Required fields are marked *

Related Articles

ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...