ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರದ್ದುಗೊಳಿಸುವಂತೆ ವಿಧಾನ ಪರಿಷತ್ ನಲ್ಲೂ ಮುಂದುವರಿದ ಬಿಜೆಪಿ ಜೆಡಿಎಸ್ ಪ್ರತಿಭಟನೆ

67

“ವಿಧಾನ ಪರಿಷತ್ತಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರದ್ದುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ, ಏಜೆನ್ಸಿಗಳಿಗೆ 40 ಲಕ್ಷ ರೂ.ಗಳನ್ನು ನೀಡಿರುವುದನ್ನು ಒಪ್ಪಿಕೊಂಡಿದೆ ಎಂದು ಬಿಜೆಪಿ ಸದಸ್ಯ ಮತ್ತು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

“ನೀವು ಏಜೆನ್ಸಿಗಳಿಗೆ ಹಣ ನೀಡಿದ್ದರೆ, ಅನುಷ್ಠಾನ ಸಮಿತಿ ಏಕೆ? ಕಾರ್ಯಕರ್ತರಿಗೆ ಸಂಬಳ ನೀಡಿ ಜನರಿಂದ ಮಾಹಿತಿ ಪಡೆಯುವುದರ ಅರ್ಥವೇನು?” ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.

ಈ ವೇಳೆ ನಾರಾಯಣಸ್ವಾಮಿ ಅವರಿಗೆ ಸಾಥ್ ನೀಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಎಂ2ಎಂ ಸಂಸ್ಥೆಗೆ ಒಂದು ಕೋಟಿ ರೂ. ಮತ್ತು ಇನ್ನೊಂದು ಸಂಸ್ಥೆಗೆ 9.25 ಕೋಟಿ ರೂ. ನೀಡಲಾಗಿದೆ

ಎಂದು ಗಮನಸೆಳೆದರು. ಇದನ್ನು ಉತ್ತರದಲ್ಲಿ ಉಲ್ಲೇಖಿಸಲಾಗಿಲ್ಲ. ಇದನ್ನು ಏಕೆ ಮರೆಮಾಚಲಾಗುತ್ತಿದೆ? ಎಂದು ಪ್ರಶ್ನಿಸಿದರು.

ಇದಕ್ಕು ಮೊದಲು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅವರು, , ಗ್ಯಾರಂಟಿಗಳಿಂದ ರಾಜ್ಯಕ್ಕೆ ನಷ್ಟವೆಂದು ಬಿಜೆಪಿ ಆರೋಪಿಸಿತ್ತು. ಹಣ ಸರಿಯಾಗಿ ಜನರಿಗೆ ತಲುಪುತಿದೆಯಾ ಎಂದು ತಿಳಿಯುವುದಕ್ಕೆ ಕೆಲ ಏಜೆನ್ಸಿಗಳಿಗೆ ವಹಿಸಿದ್ದೆವು.

ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಮೀಸಲಿರಿಸಲಾಗಿದೆ. ಮೌಲ್ಯಮಾಪನ ನಡೆಸಲು ಶೇ.1ರಷ್ಟು ಖರ್ಚು ಮಾಡಿದರೆ ತಪ್ಪೇನು? ಎಂದು ಪ್ರಶ್ನಿಸಿದರು.

ಈ ಮಧ್ಯೆ, ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರು ಮಧ್ಯಪ್ರವೇಶಿಸಿ ಶುಕ್ರವಾರ ಇದರ ಬಗ್ಗೆ ಚರ್ಚೆಗೆ ಅರ್ಧ ಗಂಟೆ ಸಮಯ ನೀಡಲಾಗುವುದು ಎಂದು ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...