ಟೊಯೋಟಾ ಬುಶೋಕುನಲ್ಲಿ ಪಾಕ್ ಪರ ಗೋಡೆ ಬರಹ ಕಾರ್ಖಾನೆ ಕಾರ್ಮಿಕರಿಗೆ ನೋಟಿಸ್ ಪೊಲೀಸರಿಗೆ ದೂರು

49

ಬಿಡದಿಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿರುವ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದ್ದು, ಕಿಡಿಗೇಡಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಬಿಡದಿಯ ಟೊಯೋಟಾ ಬುಶೋಕುನಲ್ಲಿ ಮಾರ್ಚ್ 15 ರಂದು ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ ಕೆಲವು ಕಿಡಿಗೇಡಿಗಳು ಶಾಚಾಲಯದ ಗೋಡೆಯಲ್ಲಿ “ಪಾಕಿಸ್ತಾನ ಜೈ, ಕನ್ನಡಿಗರು ಸೂ,…. ಮಕ್ಕಳು ಎಂದು ಬರೆದಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಉದ್ಯೋಗಿಗಳಿಗೆ ಕಂಪನಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಯಾರೇ ಕಿಡಿಗೇಡಿ ಇದ್ದರೂ ಕಠಿಣ ಕ್ರಮವಹಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ರೀತಿಯ ಬರವಣಿಗೆಗಳು ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿಯನ್ನು ಸೃಷ್ಟಿಸುವುದಲ್ಲದೇ ಸಂಸ್ಥೆಯಲ್ಲಿ ತೀವ್ರ ರೀತಿಯ ಅಶಿಸ್ತಿನ ಬೆಳವಣಿಗೆಗೆ ಕಾರಣವಾಗುತ್ತದೆ.

ಮುಂದುವರೆದು ಈ ರೀತಿಯ ಬರವಣಿಗೆಗಳು ದೇಶದ ಕಾನೂನಿನ ಚೌಕಟ್ಟಿನಲ್ಲಿ “ದೇಶದ್ರೋಹಿ” ಅಪರಾಧಗಳಡಿಯಲ್ಲಿ ವರ್ಗೀಕೃತವಾಗಿರುತ್ತವೆ

. ಈ ಕೃತ್ಯ ಇದೇ ರೀತಿ ಮುಂದುವರೆದಲ್ಲಿ ಮಾಹಿತಿಯನ್ನು ಪೊಲೀಸರ ಗಮನಕ್ಕೆ ತರುವುದರೊಂದಿಗೆ ಜೈಲು ವಾಸವಾಗುವವರೆಗೂ ಕಿಡಿಗೇಡಿಗಳನ್ನು ಬಿಡುವುದಿಲ್ಲ ಮತ್ತು ಬೆರಳಚ್ಚು ಹಾಗೂ ಬರವಣಿಗೆ ತಜ್ಞರ ಗಮನಕ್ಕೆ ತಂದು ಈ ಕೃತ್ಯ ಹೆಸಗುವವರನ್ನು ಕಂಡುಹಿಡಿದು ಹೆಚ್ಚಿನ ಮಟ್ಟದಲ್ಲಿ ಶಿಕ್ಷೆಯಾಗುವವರೆಗೂ ಆಡಳಿತ ಮಂಡಳಿಯು ಕಾಳಜಿ ವಹಿಸಲು ಸಿದ್ಧವಿರುತ್ತದೆ.

ಆದ್ದರಿಂದ ಎಲ್ಲಾ ವರ್ಗದ ಉದ್ಯೋಗಿಗಳು ಮೇಲೆ ತಿಳಿಸಿದ ವಿಷಯವನ್ನು ಸೂಕ್ಷ್ಮವಾಗಿ ಗಮನಕ್ಕೆ ತೆಗೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ.

ಹಾಗೂ ಯಾವುದೇ ಉದ್ಯೋಗಿಯು ಈ ರೀತಿಯ ಕಿಡಿಗೇಡಿ ಕೃತ್ಯ ಮಾಡುವಾಗ ಸಿಕ್ಕಿಬಿದ್ದಲ್ಲಿ ಅತ್ಯಂತ ಕಠಿಣ ಶಿಸ್ತಿನ ಕ್ರಮ ಎದುರಿಸಬೇಕಾಗುತ್ತದೆ ಎಂದು ಈ ಮೂಲಕ ಆಡಳಿತ ಮಂಡಳಿಯು ತಿಳಿಸುತ್ತದೆ ಎಂದು ಸುತ್ತೋಲೆ ಹೊರಡಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...