ಸಾರ್ವಜನಿಕವಾಗಿ ನಡು ರಸ್ತೆಯಲ್ಲಿ ಹೊಡೆದಾಡಿಕೊಂಡ ಬಿಜೆಪಿ ಅಧ್ಯಕ್ಷ ಹಾಗೂ ಪಿಎಸ್ಐ ದೂರು ಪ್ರತಿ ದೂರು ದಾಖಲು

2

“ಚಿತ್ರದುರ್ಗ ನಗರ ಪೊಲೀಸ್ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮತ್ತು ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ನಿನ್ನೆ ಶನಿವಾರ ಮಧ್ಯರಾತ್ರಿ 12 ಗಂಟೆ ಸುಮಾರಗೆ ಚಿತ್ರದುರ್ಗದ ಆರ್‌ಟಿಒ ಕಚೇರಿ ಬಳಿಯ ಹೋಟೆಲ್ ಮುಂದೆ ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ.

ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿ ನಂತರ ದೈಹಿಕ ಹಲ್ಲೆ, ಪರಸ್ಪರ ಹೊಡೆದಾಟಕ್ಕೆ ತಿರುಗಿತು. ನಡೆದ ಘಟನೆಯೇನು? ಮಧ್ಯರಾತ್ರಿ ರಸ್ತೆಯಲ್ಲಿ ಡ್ಯೂಟಿ ಮಾಡುತ್ತಿದ್ದ ಗಾದಿಲಿಂಗಪ್ಪ ಗಸ್ತು ತಿರುಗುತ್ತಿದ್ದ ವೇಳೆ ಮಧ್ಯರಾತ್ರಿ ಹೋಟೆಲ್ ಮುಂದೆ ಜನರ ಗುಂಪು ನಿಂತಿರುವುದನ್ನು ಕಂಡು ಅತ್ತ ಕಡೆ ಹೋದರು

. ಈ ಮಧ್ಯರಾತ್ರಿ ಇಲ್ಲೇನು ಮಾಡುತ್ತಿದ್ದೀರಿ ಎಂದು ಗುಂಪಿನಲ್ಲಿ ನಿಂತಿದ್ದವರನ್ನು ಪಿಎಸ್ ಐ ಪ್ರಶ್ನಿಸಿದ್ದಾರೆ. ಆ ಗುಂಪಿನಲ್ಲಿ ಹನುಮಂತೇಗೌಡ ಕೂಡ ಇದ್ದರು, ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷರೆಂದು ಹೇಳಿಕೊಂಡು ನೀವ್ಯಾಕೆ ನಮ್ಮನ್ನು ಏಕವಚನದಲ್ಲಿ ಮಾತನಾಡಿಸುತ್ತಿದ್ದೀರಿ, ಸರಿಯಾಗಿ ಮಾತಾಡ್ಸಿ ಎಂದು ಹೇಳಿದ್ದಾರೆ.

ಅಲ್ಲಿಂದ ಮಾತಿನ ಚಕಮಕಿ ಆರಂಭವಾಗಿ, ಕೊನೆಗೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ದಾರಿಹೋಕರು ಮತ್ತು ಹೋಟೆಲ್ ಸಿಬ್ಬಂದಿ ಮಧ್ಯಪ್ರವೇಶಿಸಿ ಜಗಳ ನಿಲ್ಲಿಸಿದರು.

ಬಿಜೆಪಿ ನಾಯಕ ನನ್ನ ಕೆಲಸಕ್ಕೆ ಅಡ್ಡಿಬಂದರು ಎಂದು ಪಿಎಸ್ ಗಾದಿಲಿಂಗಪ್ಪ ಆರೋಪಿಸುತ್ತಾರೆ. ಹನುಮಂತೇಗೌಡ ಮಧ್ಯರಾತ್ರಿ ಇತರರೊಂದಿಗೆ ಏನು ಮಾಡುತ್ತಿದ್ದೀರ ಎಂದು ನಾನು ಪ್ರಶ್ನಿಸಿದೆ,

ಅಷ್ಟಕ್ಕೆ ಸಿಟ್ಟಾಗಿ ದುರ್ವರ್ತನೆ ತೋರಿಸಿದರು ಎಂದು ಹೇಳುತ್ತಾರೆ. ನಗರ ಪೊಲೀಸರು ತಕ್ಷಣ ಆಗಮಿಸಿ ಹನುಮಂತೇಗೌಡರನ್ನು ಬಂಧಿಸಿದರು.

ಈ ಜಗಳದಲ್ಲಿ ಗಾದಿಲಿಂಗಪ್ಪ ಅವರ ಬೆರಳುಗಳಿಗೆ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಾರ್ವಜನಿಕ ಸೇವಕರೊಬ್ಬರು ಕರ್ತವ್ಯ ನಿರ್ವಹಿಸದಂತೆ ತಡೆದ ಆರೋಪದ ಮೇಲೆ ಹನುಮಂತೇಗೌಡ ವಿರುದ್ಧ ದೂರು ದಾಖಲಿಸಲಾಗಿದೆ.

ಪ್ರತಿದೂರು ಹನುಮಂತೇಗೌಡ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ. ತಮಗೆ ಎದುನೋವು ಎಂದು ಹೇಳಿಕೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಧ್ಯೆ, ಸಂಸದ ಗೋವಿಂದ್ ಎಂ ಕಾರಜೋಳ ಮತ್ತು ಎಂಎಲ್‌ಸಿ ಕೆ ಎಸ್ ನವೀನ್ ನೇತೃತ್ವದ ಜಿಲ್ಲಾ ಬಿಜೆಪಿ ಘಟಕವು ಎಸ್‌ಪಿಯನ್ನು ಭೇಟಿ ಮಾಡಿ ಪಿಎಸ್‌ಐ ಗಾದಿಲಿಂಗಪ್ಪ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ, ಕೊಲೆ, ಸುಲಿಗೆ, ದರೋಡೆ ಮತ್ತು ಅತ್ಯಾಚಾರ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ

. ಕೆಲವು ಕೆಳ ಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯ ಮತ್ತು ಜವಾಬ್ದಾರಿಯುತ ನಾಗರಿಕರ ಮೇಲೆ ದೌರ್ಜನ್ಯ, ದೈಹಿಕ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...