ರಾಜ್ಯ ಸರಕಾರದ ಹೊಸ ಮಸೂದೆ ಗ್ರೇಟರ್ ಬೆಂಗಳೂರು ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

36

ಬಿಜೆಪಿ ನಾಯಕರ ನಿಯೋಗವು ಬುಧವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, “ಗ್ರೇಟರ್ ಬೆಂಗಳೂರು ಮಸೂದೆಗೆ ಅಂಕಿತ ಹಾಕಬೇಡಿ” ಎಂದು ಮನವಿ ಮಾಡಿದೆ.

ಪ್ರಸ್ತಾವಿತ ಮಸೂದೆಯು “ಅಸಂವಿಧಾನಿಕ”ವಾಗಿದ್ದು, ನಗರ ಆಡಳಿತದ ಪ್ರಜಾಪ್ರಭುತ್ವ ರಚನೆಯನ್ನು ರಕ್ಷಿಸಲು, ಬೆಂಗಳೂರಿನ ಸಾಂಸ್ಕೃತಿಕ ಗುರುತನ್ನು ಕಾಪಾಡಿಕೊಳ್ಳಲು ಮತ್ತು ದಕ್ಷ ನಗರ ಆಡಳಿತವನ್ನು ಖಚಿತಪಡಿಸಿಕೊಳ್ಳಲು ರಾಜ್ಯಪಾಲರು, ಗ್ರೇಟರ್ ಬೆಂಗಳೂರು ಮಸೂದೆ ತಿರಸ್ಕರಿಸಬೇಕು ಎಂದು ಬಿಜೆಪಿ ಕೇಳಿಕೊಂಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಏಳು ಮಹಾನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆಯನ್ನು ಇತ್ತೀಚೆಗೆ ರಾಜ್ಯ ವಿಧಾನಮಂಡಲದ ಎರಡೂ ಸದನಗಳಲ್ಲಿ ಅಂಗೀಕರಿಸಿಲಾಗಿದೆ

ವಿಧಾನಮಂಡಲದ ಎರಡೂ ಸದನಗಳಲ್ಲಿ ಮಸೂದೆ ಅಂಗೀಕಾರವಾಗಿದ್ದು, ಈಗ ಅದನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುತ್ತಿದೆ.

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ನಿಯಮಾನುಸಾರವಿಲ್ಲದೆ ಅಂಗೀಕರಿಸಿರುವ ಗ್ರೇಟರ್ ಬೆಂಗಳೂರು ಮಸೂದೆ ಪರಿಷ್ಕರಿಸುವಂತೆ ಮನವಿ ಮಾಡಿದ್ದೇವೆ. ಬೆಂಗಳೂರನ್ನು ಒಡೆಯಬಾರದು.

ಈ ವಿಚಾರವನ್ನ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ರಾಜ್ಯಪಾಲರು ಸಹ ನಮ್ಮ ಮನವಿಗೆ ಸ್ಪಂದಿಸಿದ್ದಾರೆ

ಕೀಳು ಬುದ್ಧಿಯ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ ಎಂದು ಕಿಡಿಕಾರಿದರು ತೆರಿಗೆದಾರರ ಮೇಲೆ ಹೊರೆಯಾಗುವ ಮತ್ತು ಬೆಂಗಳೂರಿನ ಬೆಳವಣಿಗೆಗೆ ಅಡ್ಡಿಯಾಗುವ ಅನಗತ್ಯ ಮಹಾನಗರಗಳ ಮತ್ತು ಸಮಿತಿಗಳ ರಚನೆಯನ್ನು ನಿಲ್ಲಿಸುವಂತೆ ಸರ್ಕಾರವನ್ನು ವಿನಂತಿಸುತ್ತಾ

, ಆಡಳಿತ ಸುಧಾರಣೆಗಳು ಕನ್ನಡಿಗ ಗುರುತು, ಸಂಪ್ರದಾಯಗಳು ಮತ್ತು ಭಾಷಾ ಪ್ರಾತಿನಿಧ್ಯವನ್ನು ದುರ್ಬಲಗೊಳಿಸದಂತೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಆರ್ಥಿಕ ಕೇಂದ್ರೀಕರಣವನ್ನು ತಡೆಗಟ್ಟಿ ನಗರದ ಅಭಿವೃದ್ಧಿಗೆ ನ್ಯಾಯಯುತ ಮತ್ತು ಪಾರದರ್ಶಕ ನಿಧಿಯ ವಿತರಣೆಯನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...