ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ:: ಸಿ ಟಿ ರವಿ

51

“ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಎಂಎಲ್‌ಸಿ ಸಿ ಟಿ ರವಿ ಅವರು ಬುಧವಾರ ವ್ಯಂಗ್ಯವಾಡಿದರು.

ವಿಧಾನ ಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಬಜೆಟ್ ಅನ್ನು ರಾಜ್ಯದ ಅಭಿವೃದ್ಧಿಗಾಗಿ ಮಂಡಿಸಬೇಕು, ರಾಜಕೀಯ ಅಭಿವೃದ್ಧಿಗಾಗಿ ಅಲ್ಲ ಎಂದು ಹೇಳಿದರು.

ಸರ್ಕಾರಗಳು ಮತದಾರರ ಓಲೈಕೆಗಾಗಿ ಸಾಲ ತೆಗೆದುಕೊಳ್ಳುವುದನ್ನು ಮುಂದುವರಿಸಿದರೆ ಮತ್ತು ಯಾವುದೇ ಆಸ್ತಿಗಳನ್ನು ಸೃಷ್ಟಿಸದಿದ್ದರೆ ಭವಿಷ್ಯದ ಪೀಳಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ, ಎಲ್ಲ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೆ ನಮ್ಮ ಸರ್ಕಾರ ನೀಡಿದ್ದಕ್ಕಿಂತ ಕಡಿಮೆ ಅನುದಾನವನ್ನು ನೀಡಿದ್ದಾರೆ. ಆದರೆ ಮುಸ್ಲಿಮರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ.

ಗುತ್ತಿಗೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ನೀಡಲಾಗುತ್ತಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಕೂಗಿದವರಿಗೆ ಭಕ್ಷೀಸು ನೀಡಿದೆ.

ಇದು ಹಲಾಲ್‌ ಬಜೆಟ್‌. 2025–26ನೇ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ರಾಜ್ಯದ ಒಟ್ಟು ಸಾಲ ರೂ.7 ಲಕ್ಷ ಕೋಟಿ ದಾಟಲಿದ್ದು, ಅದರಲ್ಲಿ ರೂ.4 ಲಕ್ಷ ಕೋಟಿಗೂ ಹೆಚ್ಚು ಸಾಲ ಸಿದ್ದರಾಮಯ್ಯ ಅವರೇ ಮಾಡಿದ್ದಾರೆ

. 16 ಬಾರಿ ಬಜೆಟ್‌ ಮಂಡಿಸಿದ ದಾಖಲೆ ಜತೆಗೆ, ಅತಿಹೆಚ್ಚು ಸಾಲ ಮಾಡಿದ ದಾಖಲೆಯೂ ಅವರಿಗೇ ಸಲ್ಲುತ್ತದೆ ಎಂದು ಹೇಳಿದರು.

ಖಾಸಗಿ ಶಾಲೆಗಳಂತೆಯೇ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ: ಭೋಜೇಗೌಡ ಈ ನಡುವೆ ಖಾಸಗಿ ಶಾಲೆಗಳಂತೆಯೇ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವಂತೆ ಎಸ್ ಎಲ್ ಭೋಜೇಗೌಡ ಅವರು ಆಗ್ರಹಿಸಿದರು.

ಸಿದ್ದರಾಮಯ್ಯ ಅವರ 4.9 ಲಕ್ಷ ಕೋಟಿ ರೂ. ಬಜೆಟ್ ಖಾಸಗಿ ಶಾಲೆಗಳಂತೆಯೇ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವತ್ತ ಏಕೆ ಗಮನಹರಿಸಿಲ್ಲ ಎಂದು ಪ್ರಶ್ನಿಸಿದರು.

ಖಾಸಗಿ ಶಾಲೆಗಳಂತೆಯೇ ಗುಣಮಟ್ಟದ ಶಿಕ್ಷಣವನ್ನು ನೀಡುವ ಸರ್ಕಾರಿ ಶಾಲೆಗಳನ್ನು ನಾವು ಅಭಿವೃದ್ಧಿಪಡಿಸಬೇಕು. ಇದು ಯಾವಾಗ ಆಗುತ್ತದೆ?

ಎಲ್ಲಾ ಸರ್ಕಾರಿ ನೌಕರರು ಮತ್ತು ರಾಜಕಾರಣಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಮಾತ್ರ ಸೇರಿಸುವಂತೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...