ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ್ ಉದ್ಯೋಗ ಅನ್ಯ ಧರ್ಮದ ಉದ್ಯೋಗಿಗಳಿಗೆ ವರ್ಗಾವಣೆ ಭಾಗ್ಯ:: ಸಿ ಎಮ್ ಚಂದ್ರಬಾಬು ನಾಯ್ಡು

2

“ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಕ್ಷೇತ್ರ ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಬೇಕು.

ಸದ್ಯ ಅಲ್ಲಿ ಇತರ ಸಮುದಾಯದ ವ್ಯಕ್ತಿಗಳು ಕೆಲಸ ಮಾಡುತ್ತಿದ್ದರೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಶುಕ್ರವಾರ ಹೇಳಿದ್ದಾರೆ.

ತಿರುಮಲ ದೇಗುಲದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು. ಸದ್ಯ ಬೇರೆ ಧರ್ಮದ ವ್ಯಕ್ತಿಗಳು ಕೆಲಸ ಮಾಡುತ್ತಿದ್ದರೆ ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಭಾರತದಾದ್ಯಂತ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ನಿರ್ಮಿಸುವ ಯೋಜನೆಯನ್ನು ಅವರು ಘೋಷಿಸಿದ್ದಾರೆ. ವಿದೇಶಗಳಲ್ಲಿಯೂ ವೆಂಕಟೇಶ್ವರನ ದೇವಾಲಯ ಸ್ಥಾಪನೆಯಾಗಲಿ ಎಂದು ಅನೇಕ ಭಕ್ತರು ಬಯಸುತ್ತಿದ್ದಾರೆ ಎಂದರು.

ಸೆವೆನ್ ಹಿಲ್ಸ್ ಪ್ರದೇಶದ ಬಳಿಯ ವಾಣಿಜ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿದ ನಾಯ್ಡು, ಈ ಪ್ರದೇಶಕ್ಕೆ ಹೊಂದಿಕೊಂಡಿರುವ ಮುಮ್ತಾಜ್ ಹೋಟೆಲ್‌ಗೆ ಈ ಹಿಂದೆ ಅನುಮತಿ ನೀಡಲಾಗಿತ್ತು.

ಆದರೆ, ಇದೀಗ 35.32 ಎಕರೆ ಜಾಗದಲ್ಲಿ ಹೋಟೆಲ್ ನಿರ್ಮಾಣಕ್ಕೆ ಮಂಜೂರಾತಿಯನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ಸೆವೆನ್ಸ್ ಹಿಲ್ಸ್ ಬಳಿ ವ್ಯಾಪಾರೀಕರಣ ಬೇಡ ಎಂದು ಚಂದ್ರಬಾಬು ನಾಯ್ಡು ಪ್ರತಿಪಾದಿಸಿದರು

Leave a comment

Leave a Reply

Your email address will not be published. Required fields are marked *

Related Articles

900ವರ್ಷ ಪುರಾತನ ಹಿಂದೂ ದೇವಾಲಯಕ್ಕಾಗಿ ಥಾಯ್ಲೆಂಡ್-ಕಾಂಬೋಡಿಯಾ ಸಂಘರ್ಷ

ನವದೆಹಲಿ: ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ತೀವ್ರ ಸೇನಾ ಸಂಘರ್ಷ ಆರಂಭವಾಗಿದ್ದು, ಕಾಂಬೋಡಿಯಾ ಮೇಲೆ ಥಾಯ್ಲೆಂಡ್...

ಬಡ ಜನರಿರುವ ಗ್ರಾಮವನ್ನು ದತ್ತು ಸ್ವೀಕಾರ ಮಾಡಿದ  ಡಾಕ್ಟರ್ ರಾಜನ್ ದೇಶಪಾಂಡೆ ನೇತೃತ್ವದ ಸಂಸ್ಥೆ

“ಅತೀವ್ರ ಬಡತನದಿಂದ ನಲುಗಿರುವ ಧಾರವಾಡ ಜಿಲ್ಲೆಯ ಗ್ರಾಮವೊಂದನ್ನು ಡಾ. ರಾಜನ್ ದೇಶಪಾಂಡೆ ನೇತೃತ್ವದ ವಿಟ್ಟಲ್ ಮಕ್ಕಳ...

ಸುರತ್ಕಲ್ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರಿನ ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾ ಲಯದಲ್ಲಿ (ಎನ್‌ಐಟಿಕೆ) ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಗಳ...