ಬಿಜೆಪಿ 18 ಜನ ಶಾಸಕರನ್ನು 6ತಿಂಗಳ ಕಾಲ ಸದನದ ಕಲಾಪದಲ್ಲಿ ಭಾಗವಹಿಸದಂತೆ ಅಮಾನತುಗೊಳಿಸಿದ:: ಸ್ಪೀಕರ್,ಯುಟಿ ಖಾದರ್

34

ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮಂಡಿಸಿದ ಹಾಗೂ ಸದನವು ಅಂಗೀಕರಿಸಿದ ಪ್ರಸ್ತಾವದಂತೆ

ಈ ದಿನದಿಂದ ಅಂದರೆ, ದಿನಾಂಕ: 21.03.2025ರಂದು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಾ, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿದ್ದ ಕಾರಣಕ್ಕಾಗಿ
ಮಾನ್ಯ ವಿಧಾನಸಭಾ ಸದಸ್ಯರುಗಳಾದಂತಹ ಶ್ರೀ ದೊಡ್ಡನಗೌಡ ಹೆಚ್. ಪಾಟೀಲ್, ವಿರೋಧ ಪಕ್ಷದ ಮುಖ್ಯ ಸಚೇತಕರು, ಡಾ: ಅಶ್ವಥ್‌ನಾರಾಯಣ್ ಸಿ.ಎನ್., ಶ್ರೀ ಎಸ್.ಆರ್. ವಿಶ್ವನಾಥ್, ಶ್ರೀ ಬಿ.ಎ.ಬಸವರಾಜ, ಶ್ರೀ ಎಂ.ಆರ್. ಪಾಟೀಲ್, ಶ್ರೀ ಚನ್ನಬಸಪ್ಪ (ಚೆನ್ನಿ),

ಶ್ರೀ ಬಿ.ಸುರೇಶ್‌ ಗೌಡ, ಶ್ರೀ ಉಮಾನಾಥ್ ಎ. ಕೋಟ್ಯಾನ್, ಶ್ರೀ ಶರಣು ಸಲಗರ, ಡಾ: ಶೈಲೇಂದ್ರ ಬೆಲ್ದಾಳೆ, ಶ್ರೀ ಸಿ.ಕೆ.ರಾಮಮೂರ್ತಿ, ಶ್ರೀ ಯಶಪಾಲ್ ಎ.ಸುವರ್ಣ, ಶ್ರೀ ಬಿ.ಪಿ. ಹರೀಶ್, ಡಾ: ಭರತ್‌ ಶೆಟ್ಟಿ ವೈ.,

ಶ್ರೀ ಮುನಿರತ್ನ, ಶ್ರೀ ಬಸವರಾಜ್ ಮತ್ತಿಮೂಡ್, ಶ್ರೀ ಧೀರಜ್ ಮುನಿರಾಜು ಮತ್ತು ಡಾ: ಚಂದ್ರು ಲಮಾಣಿ ಅವರುಗಳನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಾವಳಿಗಳ ನಿಯಮ 348ರ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ

6 ತಿಂಗಳುಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಲಾಗಿರುತ್ತದೆ. ಸದರಿಯವರುಗಳ ಅಮಾನತ್ತು ಅವಧಿಯಲ್ಲಿ ಈ ಕೆಳಕಂಡ ಪರಿಣಾಮಗಳು ಜಾರಿಯಲ್ಲಿರುತ್ತವೆ

. 1. ಅವರುಗಳು ವಿಧಾನಸಭೆಯ ಸಭಾಂಗಣ, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವಂತಿಲ್ಲ. 2. ಅವರು ಸದಸ್ಯರಾಗಿರುವ ವಿಧಾನಮಂಡಲದ/ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಸಭೆಗಳಲ್ಲಿಯೂ ಭಾಗವಹಿಸುವಂತಿಲ್ಲ. 3. ವಿಧಾನ ಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಅವರುಗಳ ಹೆಸರಿನಲ್ಲಿ ಯಾವ್ಯದೇ ವಿಷಯವನ್ನು ನಮೂದು ಮಾಡತಕ್ಕದಲ್ಲ.

4. ಅಮಾನತ್ತಿನ ಅವಧಿಯಲ್ಲಿ ಅವರುಗಳು ನೀಡುವ ಯಾವುದೇ ಸೂಚನೆಗಳನ್ನು ಸ್ವೀಕರಿಸಲಾಗುವುದಿಲ್ಲ. 5. ಅಮಾನತ್ತಿನ ಅವಧಿಯಲ್ಲಿ ನಡೆಯುವ ಸಮಿತಿಗಳ ಚುನಾವಣೆಯಲ್ಲಿ ಅವರುಗಳು ಮತದಾನ ಮಾಡುವಂತಿಲ್ಲ.

6. ಅಮಾನತ್ತಿನ ಅವಧಿಯಲ್ಲಿ ಅವರುಗಳು ಯಾವುದೇ ದಿನಭತ್ಯೆಯನ್ನು ಪಡೆಯಲು ಅರ್ಹರಿರುವುದಿಲ್ಲ. ಎಂದು ಈ ಮೂಲಕ ತಿಳಿಯಪಡಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...