ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತ ಮಹಿಳೆ ಮೀನುಗಾರ ಮಹಿಳೆಯರ ಮೇಲೆ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕರಣವನ್ನು ಮುಂದುವರಿಸುವ ಉದ್ದೇಶ ಇಲ್ಲದಿರುವುದರಿಂದ ಮಹಿಳೆಯ ಮರು ಹೇಳಿಕೆ ದಾಖಲಿಸಿ ಕೋರ್ಟಿಗೆ ಸಲ್ಲಿಸುವಂತೆ   ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ::ನವೀನ್ ಸಾಲಿಯಾನ್ ಮನವಿ

60

  ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತ ಮಹಿಳೆ ಮೀನುಗಾರ ಮಹಿಳೆಯರ ಮೇಲೆ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕರಣವನ್ನು ಮುಂದುವರಿಸುವ ಉದ್ದೇಶ ಇಲ್ಲದಿರುವುದರಿಂದ

ಮತ್ತು ಜಾತಿನಿಂದನೆ ಘಟನೆ ಯಾವುದು ನಡೆಯಲಿಲ್ಲ ಎನ್ನುವುದು ಸಂತ್ರಸ್ತ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡುವುದು ಗಮನಿಸಿದರೆ ಅವರು ಮಲ್ಪೆಯಲ್ಲಿ ಉದ್ಯೋಗವನ್ನು ಮುಂದುವರಿಸಿಕೊಂಡು ಹೋಗುವ ಉದೇಶದಿಂದ ಎಲ್ಲವನ್ನು ಮರೆತು ಮುಂದೆ ಉದ್ಯೋಗದಲ್ಲಿ ತೊಡಗುವ  ಬಗ್ಗೆ ಮಾತನಾಡಿದ್ದಾರೆ

ಸಂತ್ರಸ್ತ  ಮಹಿಳೆಯ ಮರು ಹೇಳಿಕೆ ಪಡೆದುಕೊಂಡು ಪ್ರಕರಣದಲ್ಲಿ ದಾಖಲಾದ ಸೆಕ್ಷನ್ ಗಳನ್ನು ಬದಲಿಸಿ ನ್ಯಾಯಾಲಕ್ಕೆ ಪ್ರಕರಣಕ್ಕೆ ಸಂಬಂಧಪಟ್ಟ ವರದಿಯನ್ನು ದಾಖಲಿಸಿ ಬಂದಿತರಾದವರಿಗೆ ಜಾಮೀನು ಪಡೆಯಲು ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಜಿಲ್ಲಾ ಮೀನುಗಾರಿಕಾ ಕಾಂಗ್ರೆಸ್ ನ ಉಪಾಧ್ಯಕ್ಷ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ


ಈಗಾಗಲೇ ಪ್ರಕರಣದ ಕುರಿತು ಸಂತ್ರಸ್ತ ಮಹಿಳೆ ಮಾಧ್ಯಮದ ಮುಖಾಂತರ ಮೀನುಗಾರರ ಮಹಿಳೆಯರಿಗೆ ನಮ್ಮ ಮೇಲೆ ದ್ವೇಷ ಇಲ್ಲ ಹಾಗೂ ನನಗೆ ಅವರ ಮೇಲೆ ದ್ವೇಷ ಇಲ್ಲ ಎಂದು ಹೇಳಿಕೆ ನೀಡಿರುತ್ತಾರೆ,ಹಾಗೂ ಕೊರೊನಾ ಸಮಯದಲ್ಲೂ ಕೂಡ ನಮಗೆ ಮೀನುಗಾರರು ಸಹಾಯ ಮಾಡಿರುತ್ತಾರೆ ಮಾಧ್ಯಮಗಳಿಗೆ ಸಂತ್ರಸ್ತ ಮಹಿಳೆ ತಿಳಿಸಿದ್ದಾರೆ

ಈ ಪ್ರಕರಣದಲ್ಲಿ ಘಟನೆ ನಡೆದ ಬಳಿಕ ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮೀನುಗಾರ ಸಮಕ್ಷಮದಲ್ಲಿ ರಾಜಿ ಮಾಡಲಾಗಿತ್ತು. ಇಲ್ಲಿ ಎರಡು ಪಾರ್ಟಿಯವರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಹಾಗೂ ಠಾಣಾಧಿಕಾರಿಗಳು ಎರಡೂ ಕಡೆಯವರಿಂದ ತಪ್ರೊಪ್ಪಿಗೆ ಹಿಂಬರಹ ಬರೆಸಿಕೊಂಡು ಸೌಹಾರ್ದಯುತವಾಗಿ ಪ್ರಕರಣ ಇತ್ಯರ್ಥಗೊಳಿಸಿದ್ದರು.

ಘಟನೆಯ ವಿಡಿಯೋ ಚಿತ್ರೀಕರಣವನ್ನು ವೈಭವೀಕರಿಸಿದ ನಂತರ ಪೊಲೀಸ್ ಇಲಾಖೆ ಮುಂದುವರೆದು ಅಮಾಯಕ ಮೀನುಗಾರರ ಮೇಲೆ ಅಟ್ರಾಸಿಟಿ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿ ಬಂಧಿಸಿರುವುದು ಸರಿಯಲ್ಲ. ಪ್ರಕರಣದಲ್ಲಿ ಭಾಗಿಯಾಗದವರನ್ನು ಬಂಧಿಸಿರುವುದರಿಂದ ಮೀನುಗಾರರು ಅಭದ್ರತೆಗೆ ಒಳಗಾಗಿದ್ದಾರೆ.

ಈ ಘಟನೆ ಉದ್ದೇಶ ಪೂರ್ವಕವಾಗಿರದೆ ಕ್ಷಣಿಕ ಸಿಟ್ಟಿನಿಂದ ನಡೆದ ಘಟನೆಯಾಗಿದೆ. ಕಳೆದ ಅನೇಕ ವರ್ಷಗಳಿಂದ ಮತ್ತ್ವಕ್ಷಾಮದಿಂದ ಮೀನುಗಾರಿಕೆ ಕುಂಠಿತಗೊಂಡು ಮೀನುಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇದರ ನಡುವೆ ಮಲ್ಪೆ ಬಂದರಿನಲ್ಲಿ ನಿರಂತರವಾಗಿ ಮೀನು ಕಳ್ಳತನ ಹಾಗೂ ಮೀನುಗಾರಿಕಾ ಸಲಕರಣೆಗಳಾದ ಬೋಟಿನ ಪ್ಯಾನ್, ಬ್ಯಾಟರಿ, ಜಿಪಿಎಸ್, ವೈಯರ್ಲೆಸ್, ಫಿಶ್ ಪೈಂಡರ್, ಬಲೆ ಸಾಮಗ್ರಿಗಳು ಕಳ್ಳತನವಾಗುತ್ತಿದ್ದರಿಂದ ಇಲ್ಲಿನ ಜನ ಆಕ್ರೋಶ ಭರಿತರಾಗಿದ್ದರು.

ಮುಂದಿನ ಮಲ್ಪೆ ಬಂದರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಕಳ್ಳತನಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಹಾಗೂ ಮೀನುಗಾರಿಕಾ ಇಲಾಖೆ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಈ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿ ಮೀನುಗಾರರಿಗೆ ರಕ್ಷಣೆ ನೀಡಬೇಕು ಎಂದು ಸರಕಾರವನ್ನು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...