ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲು

59

“ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ವಿವಾದಿತ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸಂಬಂಧ ದಾಸ್ನಾ ದೇವಿ ದೇವಾಲಯದ ಅರ್ಚಕರು ಗಾಜಿಯಾಬಾದ್ ನಲ್ಲಿ ಎಫ್ ಐಆರ್ ದಾಖಲಿಸಿದ್ದು, ನರಸಿಂಹಾನಂದ್ ಅವರು ಮಹಾತ್ಮ ಗಾಂಧಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದು,

ಧಾರ್ಮಿಕ ಭಾವನೆಗಳನ್ನು ಕೆರಳಿಸುವ, ಕ್ರಿಮಿನಲ್ ಬೆದರಿಕೆ, ಅವಮಾನ, ಮಾನಹಾನಿ ಮತ್ತು ಸಾರ್ವಜನಿಕ ಶಾಂತಿಯನ್ನು ಕದಡುವ ಉದ್ದೇಶದ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ನರಸಿಂಹಾನಂದ ಅವರು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಮತ್ತು ಲೋನಿಯ ಸಹಾಯಕ ಪೊಲೀಸ್ ಕಮಿಷನರ್ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ವೀಡಿಯೋದಲ್ಲಿ ದ್ವೇಷ ಹರಡುವ ಮತ್ತು ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ನರಸಿಂಹಾನಂದ ಅವರ ಹೇಳಿಕೆಗಳು ಕೋಮು ಸೌಹಾರ್ದತೆಯನ್ನು ಕೆರಳಿಸುವ ಮತ್ತು ಭಂಗಗೊಳಿಸುವ ಉದ್ದೇಶದಿಂದ ಕೂಡಿವೆ ಎಂದು ಆರೋಪಿಸಿ ಶುಕ್ರವಾರ ಅಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಎಂದು ಉಪ ಪೊಲೀಸ್ ಆಯುಕ್ತ (ಗ್ರಾಮೀಣ) ಸುರೇಂದ್ರ ನಾಥ್ ತಿವಾರಿ ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ”

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...