ವಿಧಾನಸೌಧದಲ್ಲಿ ಅತ್ಯಾಚಾರ ನಡೆಸಿದ ಆರೋಪ ಹೊತ್ತವರು ಬಿಜೆಪಿ ಪಕ್ಷದವರು ವಿಧಾನಸಭೆಯಲ್ಲಿ ಗೂಂಡಾ ವರ್ತನೆ ನಾಚಿಕೆ ಸಂಗತಿ:: ಡಿಕೆ ಶಿವಕುಮಾರ್

33

“ಬಿಜೆಪಿ ಸಂಸ್ಕೃತಿಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ.

ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ ವರ್ತನೆ ನೋಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಹನಿಟ್ರ್ಯಾಪ್ ವಿಚಾರವಾಗಿ ಹೇಳಿಕೆ ನೀಡಿದ್ದು, ಯಾರಾದರೂ ಒಬ್ಬರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಬಹುದು

. ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ? ಎಂದು ತಿರುಗೇಟು ನೀಡಿದರು.

ಅವರ ಬಾಣದ ಗುರಿ ಯಾರ ಕಡೆ ಇದೆ ಎಂದು ಕೇಳಿದಾಗ, ಅವರು ಯಾರತ್ತ ಗುರಿ ಇಟ್ಟಿದ್ದಾರೋ ಗೊತ್ತಿಲ್ಲ. ಇದು ಅವರ ಸೆಲ್ಫ್ ಗೋಲ್ ಇರಬೇಕು ಎಂದು ವ್ಯಂಗವಾಡಿದರು.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...