ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ವಿರುದ್ಧದ ಹೋರಾಟದಲ್ಲಿ ತನ್ನ ಮೈತ್ರಿ ಪಾಲುದಾರ ಬಿಜೆಪಿಯೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಪ್ರಾದೇಶಿಕ ಪಕ್ಷದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ನಾವು ಪಕ್ಷದ ಸಿದ್ಧಾಂತ ಮತ್ತು ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಬೆಲೆ ಏರಿಕೆ, ದುರಾಡಳಿತ, ಭ್ರಷ್ಟಾಚಾರ ಇತ್ಯಾದಿಗಳ ವಿರುದ್ಧದ ಹೋರಾಟದಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸುತ್ತೇವೆ.
ಆದರೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿಯನ್ನು ಒದಗಿಸಿದ್ದಾರೆ. ಆದ್ದರಿಂದ, ಈ ಹೋರಾಟದಲ್ಲಿ ನಾವು ಬಿಜೆಪಿಯನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿ ಈ ಸಂಬಂಧ, ಬಿಜೆಪಿ ಜೆಡಿಎಸ್ ಜೊತೆ ಚರ್ಚಿಸಲಿಗೆ ಎಂದು ಹೇಳಿದರು.
ಏತನ್ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶನಿವಾರ, ಕಾಂಗ್ರೆಸ್ ನಿಂದ ಹಿಂದೂಗಳಿಗೆ ಆಗಿರುವ ಅನ್ಯಾಯದ ಬಗ್ಗೆ ಅರಿವು ಮೂಡಿಸಲು ಬಿಜೆಪಿ ರಾಜ್ಯಾದ್ಯಂತ ಸಾರ್ವಜನಿಕ ಜಾಗೃತಿ ಮೂಡಿಸಲಿದೆ ಎಂದು ಹೇಳಿದರು.
ಮುಸ್ಲಿಂ ಮೀಸಲಾತಿ ಸಂವಿಧಾನಕ್ಕೆ ವಿರುದ್ಧವಾಗಿದೆ. ಕಾಂಗ್ರೆಸ್ ವಿರುದ್ಧದ ಈ ಹೋರಾಟವನ್ನು ನಾವು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ.
ಪಕ್ಷದ ನಾಯಕರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಆಂದೋಲನವನ್ನು ಯೋಜಿಸುತ್ತೇವೆ” ಎಂದು ಅವರು ಹೇಳಿದರು
Leave a comment