ಮಹಾರಾಷ್ಟ್ರದಲ್ಲಿ ಮುಂದುವರಿದ ಬುಲ್ಡೋಜರ್ ಕಾರ್ಯಚರಣೆ ನಾಗಪುರ ಹಿಂಸಾಚಾರ ಪ್ರಮುಖ ಆರೋಪಿ ಪಹೀಮ್ ಖಾನ್ ಮನೆ ಕೆಡವಿದ ಸಿಎಂ ದೇವೇಂದ್ರ ಪಡ್ನವಿಸ್  ಸರಕಾರ

33

“ನಾಗ್ಪುರದ ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ಫಹೀಮ್ ಖಾನ್ ಮನೆಯ ಅಕ್ರಮ ಭಾಗವನ್ನು ಕೆಡವಿದ್ದಾರೆ. ಮಾರ್ಚ್ 17ರಂದು ನಗರದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಖಾನ್ ಪ್ರಮುಖ ಆರೋಪಿಯಾಗಿದ್ದಾನೆ. ಖಾನ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ.

ಫಹೀಮ್ ಅಲ್ಪಸಂಖ್ಯಾತ ಪ್ರಜಾಸತ್ತಾತ್ಮಕ ಪಕ್ಷದ (MDP) ಪ್ರಮುಖ ನಾಯಕನಾಗಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 100ಕ್ಕೂ ಹೆಚ್ಚು ಜನರಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ.

ಅಧಿಕಾರಿಗಳ ಪ್ರಕಾರ, ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ (NMC) ಕೆಲವು ದಿನಗಳ ಹಿಂದೆ ಖಾನ್ ಅವರಿಗೆ ನೋಟಿಸ್ ನೀಡಿತ್ತು. ಅದರಲ್ಲಿ ವಿವಿಧ ನ್ಯೂನತೆಗಳು ಮತ್ತು (ಅವರ ಮನೆಯ) ಕಟ್ಟಡ ಯೋಜನೆಗೆ ಅನುಮೋದನೆ ನೀಡದಿರುವುದನ್ನು ಉಲ್ಲೇಖಿಸಲಾಗಿತ್ತು.

ಈ ಮನೆ ಇಲ್ಲಿನ ಯಶೋಧರ ನಗರ ಪ್ರದೇಶದ ಸಂಜಯ್ ಬಾಗ್ ಕಾಲೋನಿಯಲ್ಲಿದ್ದು, ಖಾನ್ ಅವರ ಪತ್ನಿಯ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಅವರು ಹೇಳಿದರು. ಎಂಡಿಪಿ ನಗರ ಮುಖ್ಯಸ್ಥ ಖಾನ್ ಪ್ರಸ್ತುತ ಜೈಲಿನಲ್ಲಿದ್ದಾರೆ.

ಮಾರ್ಚ್ 17ರಂದು ಛತ್ರಪತಿ ಸಂಭಾಜಿನಗರದಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಧಾರ್ಮಿಕ ಶಾಸನಗಳನ್ನು ಹೊಂದಿರುವ ಹಾಳೆಯನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿ ಹರಡಿದ ನಂತರ ಹಿಂಸಾಚಾರ ಭುಗಿಲೆದ್ದಿತು.

ನಗರದ ಹಲವು ಭಾಗಗಳಲ್ಲಿ ಭಾರಿ ಕಲ್ಲು ತೂರಾಟ ನಡೆದಿದ್ದು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಘರ್ಷಣೆ ವೇಳೆ ಮೂವರು ಉಪ ಪೊಲೀಸ್ ಆಯುಕ್ತರ ಮಟ್ಟದ ಅಧಿಕಾರಿಗಳು ಸೇರಿದಂತೆ 33 ಪೊಲೀಸರು ಗಾಯಗೊಂಡಿದ್ದರು.

ಹಿಂಸಾಚಾರದ ಸಮಯದಲ್ಲಿ ಹಾನಿಗೊಳಗಾದ ಆಸ್ತಿಗಳ ಬೆಲೆಯನ್ನು ಗಲಭೆಕೋರರಿಂದ ವಸೂಲಿ ಮಾಡಲಾಗುವುದು ಮತ್ತು ಪಾವತಿಸದಿದ್ದರೆ, ಅವರ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಷ್ಟವನ್ನು ಸರಿದೂಗಿಸಲು ಮಾರಾಟ ಮಾಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದರು.

ಇನ್ನು ಗೃಹ ಖಾತೆ ಹೊಂದಿರುವ ಫಡ್ನವೀಸ್ ಪೊಲೀಸರ ಮೇಲೆ ದಾಳಿ ಮಾಡಿದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವವರೆಗೆ ನನ್ನ ಸರ್ಕಾರ ವಿಶ್ರಮಿಸುವುದಿಲ್ಲ ಎಂದು ಹೇಳಿದ್ದರು



Leave a comment

Leave a Reply

Your email address will not be published. Required fields are marked *

Related Articles

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...

ಬಿಜೆಪಿಯಿಂದ ನಮಗೆ ಅಚ್ಚೆದಿನ್ ಬಂದಿಲ್ಲ ಬೆಂಬಲಿಸಿದ ಎಲ್ಲರಿಗೂ ರಾಮ ಮಂದಿರ ನಿರ್ಮಾಣವಾಗಿ ಲಾಭವಾಗಿದೆ :: ಮೋಹನ್ ಭಾಗವತ್

“ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ...