18 ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿದ ಆದೇಶವನ್ನು ಹಿಂಪಡೆಯುವಂತೆ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಗೆ ಬಿಜೆಪಿ ಒತ್ತಾಯ

34

“18 ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿದ ಆದೇಶವನ್ನು ಹಿಂಪಡೆಯುವಂತೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಬಿಜೆಪಿ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸ್ಪೀಕರ್ ಅವರ ನಿರ್ಧಾರವನ್ನು “ಕಾನೂನುಬಾಹಿರ, ಸಂವಿಧಾನಬಾಹಿರ, ಏಕಪಕ್ಷೀಯ” ಎಂದು ಕರೆದರು

. ಸ್ಪೀಕರ್ ಶಾಸಕರನ್ನು ಮಾತ್ರವಲ್ಲದೆ ಅವರ ಕ್ಷೇತ್ರದ ಜನರನ್ನು ಸಹ ಅವಮಾನಿಸಿದ್ದಾರೆ ಎಂದು ಅವರು ಹೇಳಿದರು.

ಅಮಾನತುಗೊಂಡ ಶಾಸಕರನ್ನು ವಿಧಾನಸಭೆ ಲಾಬಿ ಅಥವಾ ಸಭಾಂಗಣಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಅವರೇನು ಭಯೋತ್ಪಾದಕರೇ ಅಥವಾ ನಕ್ಸಲೀಯರೇ? ಎಂದು ಪ್ರಶ್ನಿಸಿದರು

. ಶಾಸಕರು ಸ್ಥಾಯಿ ಸಮಿತಿ ಸಭೆಗಳಿಗೆ ಹಾಜರಾಗುವುದನ್ನು ನಿಷೇಧಿಸುವ ಸ್ಪೀಕರ್ ನಿರ್ಧಾರಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಬಿಜೆಪಿ ಶಾಸಕರು ವಿಧಾನಸಭೆಯ ಗೌರವವನ್ನು ರಕ್ಷಿಸಲು ಹೋರಾಡುತ್ತಿದ್ದಾರೆ. ಆದರೆ ಸ್ಪೀಕರ್ “ಹಿಟ್ಲರ್‌ನಂತೆ ವರ್ತಿಸಿದ್ದಾರೆಂದು ಕಿಡಿಕಾರಿದರು.

ನಾನು ಇಂದು ಬೆಳಿಗ್ಗೆ ಸ್ಪೀಕರ್ ಅವರೊಂದಿಗೆ ಮಾತನಾಡಿದೆ. ಅವರ ಈ ನಿರ್ಧಾರವು ವಿಧಾನಸಭೆಗೆ ಗೌರವವನ್ನು ತರುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇನೆ.

ಮೊದಲ ಬಾರಿಗೆ ಸದಸ್ಯರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ. ಸ್ಪೀಕರ್ ಮತ್ತು ಕಾಂಗ್ರೆಸ್‌ಗೆ ತಿಳುವಳಿಕೆ ಇದೆಯೇ? ಎಂದು ವಾಗ್ದಾಳಿ ನಡೆಸಿದರು. ಅಮಾನತುಗೊಂಡ ಶಾಸಕರೊಂದಿಗೆ ದೃಢವಾಗಿ ನಿಲ್ಲುತ್ತೇವೆ.

ನಾವೂ ವಿಧಾನಸಭೆಗೆ ಪ್ರವೇಶಿಸುವುದಿಲ್ಲ. ಸಮಿತಿ ಸಭೆಗಳಿಗೆ ಹಾಜರಾಗುವ ಬಗ್ಗೆ ಶೀಘ್ರದಲ್ಲೇ ನಿರ್ಧರಿಸುತ್ತೇವೆ ಎಂದು ತಿಳಿಸಿದರು. ಏಪ್ರಿಲ್ 1 ಅಥವಾ 2 ರಂದು ಸ್ಪೀಕರ್ ಬೆಂಗಳೂರಿಗೆ ಹಿಂತಿರುಗುವವರೆಗೆ ನಾವು ಅವರ ನಿರ್ಧಾರಕ್ಕಾಗಿ ಕಾಯುತ್ತೇವೆ.

ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದರು. ಹಿಂದುಗಳಿಂದ ಶೇ.4ರಷ್ಟು ಮೀಸಲಾತಿಯನ್ನು ಕಿತ್ತುಕೊಳ್ಳುತ್ತಿರುವ ಸರ್ಕಾರ ಅದನ್ನು ಮುಸ್ಲಿಮರಿಗೆ ನೀಡುತ್ತಿದೆ. ಮಂಗಳೂರಿನಲ್ಲಿ ಮುಸ್ಲಿಮರು ಈಗಾಗಲೇ ಶೇ.50 ರಷ್ಟು ಗುತ್ತಿಗೆ ಕಾಮಗಾರಿಯಲ್ಲಿ ಮೀಸಲಾತಿ ಪಡೆಯುತ್ತಿದ್ದಾರೆ.

ಸರ್ಕಾರದ ಪ್ರಸ್ತುತ ನಿರ್ಧಾರದಿಂದ ಈ ಮೀಸಲಾತಿ ಶೇ.75ರಷ್ಟಾಗಲಿದೆ. ಹೀಗಾಗಿ ಸರ್ಕಾರದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ಹೋರಾಟ ಮುಂದುವರಯಲಿದೆ.

ವಿಚಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ. ಪಕ್ಷವು ರಾಜ್ಯವ್ಯಾಪಿ ಪ್ರತಿಭಟನೆಗಳನ್ನು ಆಯೋಜಿಸುತ್ತದೆ ಎಂದು ಹೇಳಿದರು

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...