ಉಡುಪಿಯಲ್ಲಿ ಗಾಂಧಿ ಭಾರತ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಸಮಾವೇಶ

3

ಉಡುಪಿಯಲ್ಲಿ ಸಮಾನ ಮನಸ್ಕರ ಸಂಘಟನೆ ಹಾಗೂ ಉಡುಪಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಗಾಂಧಿ ಭಾರತ, ಜೈ ಬಾಪು ,ಜೈ ಭೀಮ್ ಜೈ ಸಂವಿಧಾನ ಬೃಹತ್ ಸಮಾವೇಶವು ನಡೆಯಿತು.

ಸಮಾವೇಶಕ್ಕೂ ಮುನ್ನ ಸಾವಿರಾರು ಕಾರ್ಯಕರ್ತರು ಬೃಹತ್ ಮೆರವಣಿಗೆವ ಮೂಲಕ ಸಾಗಿಬಂದರು. ಸಮಾವೇಶವನ್ನು ಮಾಜಿ‌ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು

ಈ ಸಂಧರ್ಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ‌ ವಿಧಾನ ಸಭೆ ಮಾಜಿ‌ ಸ್ಪೀಕರ್ ರಮೇಶ್ ಕುಮಾರ್ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರನ್ನು ಕೇವಲ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸುವುದು ತಪ್ಪು

. ಅವರೊಬ್ಬ ಮಹಾನ್ ಮಾನವತಾವಾದಿ ಎಂಬುದಾಗಿ ನಾವೆಲ್ಲ ಸ್ವೀಕರಿ ಸಬೇಕು. ಈಗ ದೇಶಕ್ಕೆ ನೆಗಡಿ ಹಿಡಿದಿದೆ. ಅದಕ್ಕೆ ಮೂಗು ಸುಧಾರಿಸುವವರೆಗೆ ಶುದ್ಧವಾಗಿ ಇಟ್ಟುಕೊಳ್ಳಬೇಕು.

ನೆಗಡಿಯಾಗಿದೆ ಎಂದು ಮೂಗನ್ನೇ ಕಿತ್ತು ಹಾಕಲು ಹೋಗಬಾರದು. ಮೀಸಲಾತಿಯೇ ಇಲ್ಲದ ಕಾಲದಲ್ಲಿ ಸಂವಿಧಾನ ರಚಿಸಲು ಅಂಬೇಡ್ಕರ್‌ರನ್ನು ಆಯ್ಕೆ ಮಾಡಲಾಯಿತು.

ಯಾಕೆಂದರೆ ಅವರು ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಕಾನೂನು ಶಾಸ್ತ್ರದಲ್ಲಿ ಪಾಂಡಿತ್ಯ ಹೊಂದಿದ್ದರು. ಸಂವಿಧಾನದಿಂದಾಗಿ ಈ ದೇಶದಲ್ಲಿ ಹೋರಾಟ ಮಾಡದವರಿಗೂ ಸ್ವಾತಂತ್ರ್ಯ ದೊರೆತಿದೆ ಎಂದರು.

ಅಂಬೇಡ್ಕರ್ ಸಂವಿಧಾನ ರಚಿಸುವ ಮುನ್ನ ಈ ದೇಶವು ಮನಸ್ಮೃತಿ ಆಧಾರದಲ್ಲಿ ನಡೆಯುತ್ತಿತ್ತು. ಈ ದೇಶವನ್ನು ಸಂವಿಧಾನದ ಮೂಲಕ ಸುಧಾರಿಸಲು ಸಾಧ್ಯವಿಲ್ಲ ಎಂದು ಗೋಲ್ ವಾಲ್ಕರ್ ಬರೆದಿದ್ದರು. ಅದಕ್ಕೆ ಅವರು ಸಂವಿಧಾನ ಬದಲಾಯಿಸಬೇಕು ಎಂದು ಹೇಳಿದ್ದರು.

ಅಂಬೇಡ್ಕರ್ ಅವರ ಬಾಲ್ಯ, ಅಂಬೇಡ್ಕರ್ ತಂದೆ ತಾಯಿಗೆ ಆದ ಅನುಭವ ಅವರಿಗೆ ಆಗಿರಲಿಲ್ಲ. ಜಾತಿಯ ಕಾರಣಕ್ಕೆ ನೋವು ಅನುಭವಿಸಿದ ಅಂಬೇಡ್ಕರ್ ಸಂವಿಧಾನ ರಚಿಸುತ್ತಾರೆ ಎಂದು ಅವರು ತಿಳಿಸಿದರು.

ಸಂವಿಧಾನ ಕರಡು ಸಮಿತಿಯ ಸಂಪೂರ್ಣ ಕೆಲಸವನ್ನು ಅಂಬೇಡ್ಕರ್ ಒಬ್ಬರೇ ಮಾಡಿದ್ದರು. ಅಂಬೇಡ್ಕರ್ ಹಿಂದುವಾಗಿ ಹುಟ್ಟಿದರು ಆದರೆ ಹಿಂದುವಾಗಿ ಸಾಯಲು ಬಯಸಿರಲಿಲ್ಲ. ಪರಿಶಿಷ್ಟ ಜಾತಿಯ ತಮ್ಮ ಸಮುದಾಯದವರಿಗೆ ಪ್ರತ್ಯೇಕ ಮತದಾನದ ಹಕ್ಕು ಅಂಬೇಡ್ಕರ್ ಕೇಳಿದ್ದರು

. ಆದರೆ ಗಾಂಧೀಜಿ ಇದಕ್ಕೆ ವಿರೋಧ ಸೂಚಿಸಿದ್ದರು. ದೇಶದ ಸ್ವಾತಂತ್ರ್ಯದ ಜೊತೆ ತನ್ನ ಜನರ ಸುಧಾರಣೆ ಅಂಬೇಡ್ಕರ್‌ಗೆ ಆದ್ಯತೆಯಾಗಿತ್ತು. ಅಂಬೇಡ್ಕರ್ ಸಂವಿಧಾನ ರಚಿಸುವ ಮುನ್ನ ಈ ದೇಶವು ಮನಸ್ಮೃತಿ ಆಧಾರದಲ್ಲಿ ನಡೆಯುತ್ತಿತ್ತು. ಈ ದೇಶವನ್ನು ಸಂವಿಧಾನದ ಮೂಲಕ ಸುಧಾರಿಸಲು ಸಾಧ್ಯವಿಲ್ಲ ಎಂದು ಗೋಲ್ ವಾಲ್ಕರ್ ಬರೆದಿದ್ದರು. ಅದಕ್ಕೆ ಅವರು ಸಂವಿಧಾನ ಬದಲಾಯಿಸಬೇಕು ಎಂದು ಹೇಳಿದ್ದರು.

ಅಂಬೇಡ್ಕರ್ ಅವರ ಬಾಲ್ಯ, ಅಂಬೇಡ್ಕರ್ ತಂದೆ ತಾಯಿಗೆ ಆದ ಅನುಭವ ಅವರಿಗೆ ಆಗಿರಲಿಲ್ಲ. ಜಾತಿಯ ಕಾರಣಕ್ಕೆ ನೋವು ಅನುಭವಿಸಿದ ಅಂಬೇಡ್ಕರ್ ಸಂವಿಧಾನ ರಚಿಸುತ್ತಾರೆ ಎಂದು ಅವರು ತಿಳಿಸಿದರು. ಇನ್ನು ಕಾಂಗ್ರೆಸ್ ಮಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ ದೇಶದ ಕಟ್ಟಕಡೆಯ ವ್ಯಕ್ತಿಗೂ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನ ಬದುಕುವ ಹಕ್ಕು ನೀಡಿದೆ.ದುರಾದೃಷ್ಕರ ವಿಚಾರ ಏನೇಂದ್ರೆ ಇವತ್ತು ದೇಶದಲ್ಲಿ ಬಡವ ಬಡವನಾಗಿಯೇ ಉಳಿದಿದ್ದಾನೆ

.ಶ್ರೀಮಂತ ಶ್ರೀಮಂತರಾಗಿ ಬೇಳೆಯುತ್ತಿದ್ದಾರೆ.ಇವತ್ತು ಸಂವಿಧಾನದ ಅರಿವು ಎಲ್ಲರಲ್ಲೂ ಮೂಡಬೇಕಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬಡವರು ಹಿಂದುಳಿದವರು ಬದುಕಲು ಕಷ್ಟವಾಗಬಹುದು , ಹೀಗಾಗಿ ಗಾಂಧಿ ಭಾರತ ಸಂವಿಧಾನ ಅರಿವು ಸಮಾವೇಶವನ್ನು ನಾವು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

ಸಮಾವೇಶದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ ,ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಲಾವಣ್ತ ಬಲ್ಲಾಳ್ ದಿನೇಶ್ ಶೆಟ್ಟಿ ಮೊಳ ಹಳ್ಳಿ, ವಿಶ್ವಾಸ್ ವಿ ಅಮೀನ್ ಪಡುಬಿದ್ರಿ  ,ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನ ನಾಯಕರುಗಳು ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...