ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಸ್ವಸಹಾಯ ಸಂಘದ ಸಿಬ್ಬಂದಿಗಳಿಂದ ಸಾಲ ಮರುಪಾವತಿಗಾಗಿ ಕಿರುಕುಳ ಯುವತಿ ಆತ್ಮಹತ್ಯೆಗೆ ಯತ್ನ ಸಂಘದ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲು

2

ಉಡುಪಿ ಜಿಲ್ಲೆ , ಹಿರಿಯಡ್ಕ ಬೊಮ್ಮಾರ ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸ್ವಸಹಾಯ ಸಂಘದ ಸಿಬ್ಬಂದಿಗಳಿಂದ ಸಾಲ ಬಾಕಿಉಳಿಸಿಕೊಂಡಿದ್ದ ಮಹಿಳೆಯ

ಸಹೋದರಿಯ ಪುತ್ರಿಗೆ ಕಿರುಕುಳ ಯುವತಿ ಆತ್ಮಹತ್ಯೆ ಯತ್ನ ಸ್ಥಳೀಯರಿಂದ ರಕ್ಷಣೆ ಸ್ವಸಹಾಯ ಸಂಘದ ಸಿಬ್ಬಂದಿಗಳ ವಿರುದ್ಧ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲು

ಬೊಮ್ಮರಬೆಟ್ಟು ಗ್ರಾಮ ಹಿರಿಯಡ್ಕ ದುಗುಣಿ ಇವರ ತಂಗಿ ಇಂದಿರಾ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಸಂಘದ ಸದಸ್ಯರಾಗಿದ್ದು ಕೆಲವು ತಿಂಗಳ ಹಿಂದೆ ಸಂಘದಲ್ಲಿ 65 ಸಾವಿರ ರೂಪಾಯಿ ಸಾಲವನ್ನು ಪಡೆದಿದ್ದರು


ವಾರಕ್ಕೆ 1 ಸಾವಿರ ದಂತೆ ಸಾಲದ ಕಂತನ್ನು ಕಟ್ಟುತ್ತಾ ಬರುತ್ತಿದ್ದು, ಇಂದಿರಾರವರ ಮಗ ಎರಡು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟ ಕಾರಣ

ಇಂದಿರಾವರಿಗೆ ಕೆಲಸಕ್ಕೆ ಹೋಗಲು ಸಾಧ್ಯವಾಗದೇ ಎರಡು ತಿಂಗಳಿನಿಂದ ವಾರದ ಕಂತನ್ನು ಕಟ್ಟಲು ವಿಳಂಬವಾದ ಕಾರಣದಿಂದ ದಿನಾಂಕ 22/03/2025 ರಂದು ಸಂಜೆ 6:00 ಗಂಟೆ ಸಮಯಕ್ಕೆ  ದುಗುಣಿಯವರ ಮಗಳು ಸಂಧ್ಯಾ ಕೆಲಸಕ್ಕೆ ಹೋಗಿ ಮನೆಗೆ ಬಂದಾಗ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಸ್ಥೆಯಲ್ಲಿ ಕೆಲಸದಲ್ಲಿರುವ ಸಿಬ್ಬಂದಿಗಳಾದ ನಳಿನಿ, ಪ್ರಭಾಕರ, ವಿಜಯ, ಸವಿತಾ ಇವರು ಧಾವಿಸಿ ಮನೆ ಮುಂದೆ 7:30 ಗಂಟೆ ತನಕ ಕೂತು ಕೆಟ್ಟ ಪದಗಳನ್ನು ಉಪಯೋಗಿಸಿ ಆತ್ಮಹತ್ಯೆಗೆ ಪ್ರಚೋದನೆ ಕೊಟ್ಟ ಹಿನ್ನೆಲೆಯಲ್ಲಿ.

ದುಗುಣಿ ,ಯವರ  ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಆಗ ನೆರೆಕೆರೆಯವರು ಸಂಧ್ಯಾಳನ್ನು ರಕ್ಷಣೆ ಮಾಡಿರುವುದಾಗಿ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 27/2025 ಕಲಂ: 329(4),351(2) ಜೊತೆಗೆ 3(5) BNS ‌ ಮತ್ತು ಕಲಂ: 8,12 The Karnataka Micro loan and small loan(Prevention Coerice actions) ordiance 2025 ರಂತೆ ಪ್ರಕರಣ ದಾಖಲಾಗಿರುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...