ಪಾಕ್ ಆಕ್ರಮಿತ ಕಾಶ್ಮೀರವನ್ನು ಕೂಡಲೇ ತೆರವುಗೊಳಿಸಲೇಬೇಕು: ವಿಶ್ವಸಂಸ್ಥೆ ಸಭೆಯಲ್ಲಿ ಪಾಕಿಸ್ತಾನವನ್ನು ತರಾಟೆ ತೆಗೆದುಕೊಂಡ ಭಾರತ

72

ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಭಾರತ ವಿಶ್ವಸಂಸ್ಥೆಯಲ್ಲಿ ಖಂಡಿಸಿದೆ. ಕೂಡಲೇ ಪಾಕ್ ಆಕ್ರಮಿತ ಕಾಶ್ಮಿರವನ್ನು ತೆರವುಗೊಳಿಸಲೇಬೇಕು ಎಂದು ಹೇಳಿದೆ.

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ವಿಶ್ವಸಂಸ್ಥೆಯ ಶಾಂತಿ ಕಾರ್ಯಾಚರಣೆಗಳಲ್ಲಿ ಹೊಂದಾಣಿಕೆಯನ್ನು ಹೆಚ್ಚಿಸುವ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯಲ್ಲಿ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರವು ಹಿಂದೆ, ಇಂದು ಮತ್ತು ನಾಳೆ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿರುತ್ತದೆ. ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ, ಅದನ್ನು ತೆರವುಗೊಳಿಸಲೇಬೇಕು ಎಂದು ಹರೀಶ್ ಹೇಳಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಕೆಣಕಿದ ನಂತರ ಹರೀಶ್ ಅವರ ಬಲವಾದ ಪ್ರತಿಕ್ರಿಯೆ ಬಂದಿದೆ.

ಪಾಕಿಸ್ತಾನದ ಪ್ರತಿನಿಧಿಯು ಭಾರತದ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೇಲೆ ಅನಗತ್ಯ ಹೇಳಿಕೆಗಳನ್ನು ನೀಡಿರುವುದನ್ನು ಭಾರತ ಗಮನಿಸಬೇಕಾಗಿದೆ ಎಂದು ಹರೀಶ್ ಹೇಳಿದ್ದಾರೆ.

ಇಂತಹ ಪುನರಾವರ್ತಿತ ಉಲ್ಲೇಖಗಳು ಅವರ ಕಾನೂನುಬಾಹಿರ ಹಕ್ಕುಗಳನ್ನು ದೃಢೀಕರಿಸುವುದಿಲ್ಲ ಅಥವಾ ಅವರ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ

ತಮ್ಮ ಸಂಕುಚಿತ ಮತ್ತು ವಿಭಜಕ ಕಾರ್ಯಸೂಚಿಯನ್ನು ಸಾಧಿಸಲು ಈ ವೇದಿಕೆಯ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬೇಡಿ ಎಂದು ನಾವು ಪಾಕಿಸ್ತಾನಕ್ಕೆ ಸಲಹೆ ನೀಡುತ್ತೇವೆ ಎಂದಿದ್ದಾರೆ.

ಆಗಸ್ಟ್ 5, 2019 ರಂದು ಭಾರತವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಹದಗೆಟ್ಟವು.

Leave a comment

Leave a Reply

Your email address will not be published. Required fields are marked *

Related Articles

ತನ್ನ ಪ್ರದೇಶಗಳಿಗೆ ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಹಿಂದೂ ಹೆಸರು ಮರುನಾಮಕರಣ, ಬದಲಾಗುತ್ತಿದೇಯಾ ಪಾಕಿಸ್ತಾನ??

ಲಾಹೋರ್: ಭಾರತದ ಪ್ರಧಾನಿ ಮೋದಿ ಅಖಂಡ ಭಾರತದ ಕುರಿತು ಮಾಡಿದ್ದ ಭಾಷಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲಿ...

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....

ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್‌ಸಿ ಫ್ರಾನ್ಸೆಸ್ಕಾ ಹಡಗುಗಳನ್ನು ವಶಕ್ಕೆ ಪಡೆದ ಇರಾನ್ ನೌಕಾ ಪಡೆ

“ಟೆಹರಾನ್: ಭಾರತಕ್ಕೆ ಬರುತ್ತಿದ್ದ ಹಡಗು ಸೇರಿದಂತೆ ಎರಡು ಹಡಗುಗಳ ಮೇಲೆ ಇರಾನ್ ನೌಕಪಡೆ ಸಮುದ್ರದಲ್ಲೇ ಮಿಂಚಿನ...