ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ

2

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ಮತ್ತು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದರಿಂದ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ ಹರಿಬಿಟ್ಟು ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದರು. ಜೊತೆಗೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದರು.

ಹೀಗಾಗಿ, ಬಿಜೆಪಿ ಹೈಕಮಾಂಡ್‌ನಿಮದ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು.

ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ಗೆ ಅವರ ಉತ್ತರದಿಂದ ಸೂಕ್ತ ಉತ್ತರ ಸಿಕ್ಕಿಲ್ಲವೆಂದು ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಇನ್ನು ಅವರ ಶಾಸಕ ಸ್ಥಾನಕ್ಕೂ ಕುತ್ತು ಬರುತ್ತಾ ಎಂಬ ಪ್ರಶ್ನೆ ಶುರುವಾಗಿದೆ.

ಶಾಸಕ ಸ್ಥಾನದಲ್ಲಿ ಅವರು ಸ್ವತಂತ್ರವಾಗಿ ಮುಂದುವರೆಯಬಹುದು. ಒಂದು ವೇಳೆ ಪಕ್ಷದ ಚಿಹ್ನೆಯಡಿ ಗೆದ್ದಿರುವುದು ತನಗೆ ಬೇಡವೆಂದು ರಾಜೀನಾಮೆ ಕೊಟ್ಟರೆ, ಶಾಸಕ ಸ್ಥಾನ ರದ್ದಾಗಿ ಪುನಃ ಚುನಾವಣೆಗೆ ಹೋಗಬಹುದು.

ಉಚ್ಛಾಟನೆ ಆದೇಶದಲ್ಲಿ ಏನಿದೆ? ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ

ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ.

ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 [ಆರು] ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ

  ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...