ಬಿಜೆಪಿಯಲ್ಲಿರುವ ಲಿಂಗಾಯತ ಶಾಸಕರೇ, ಬಿಜೆಪಿ ಪಕ್ಷ ಬಿಟ್ಟು ಹೊರಬನ್ನಿ ಜಯ ಮೃತ್ಯುಂಜಯ ಸ್ವಾಮೀಜಿ ಕರೆ

30

“ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ

. ಧಾರವಾಡದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ ಉಚ್ಛಾಟನೆಗೆ ಬಿಎಸ್‌ ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಕಾರಣ. ಇದನ್ನು ನಾನು ನೇರವಾಗಿ ಆರೋಪ ಮಾಡುತ್ತೇನೆ. ಬಿಜೆಪಿಯಲ್ಲಿರುವ ಪಂಚಮಸಾಲಿಗಳು ರಾಜೀನಾಮೆ ನೀಡಬೇಕು. ಪಕ್ಷದಲ್ಲಿರುವ ಪಂಚಮಸಾಲಿಗಳು ಹೊರಗೆ ಬರಬೇಕು.

ಯತ್ನಾಳ ಉಚ್ಛಾಟನೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರ ಬರಬೇಕು ಎಂದು ಕರೆ ನೀಡಿದ್ದಾರೆ. ಯತ್ನಾಳ್‌ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ?

ಯತ್ನಾಳ್‌ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದರು. ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಇದರಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಈಗ ಬಿಜೆಪಿಗೆ 60 ಸ್ಥಾನ ಬಂದಿವೆ. ಮುಂದೆ ಮೂವತ್ತು ಸೀಟು ಕೂಡ ಬರುವದಿಲ್ಲ.

ಮೋದಿ ಹಾಗೂ ಅಮಿತ್ ಶಾ ಅವರಿಗೆ ಗೊತ್ತಿರದೇ ಇರುವ ಅಂಶಗಳು ಇಲ್ಲಿವೆ ಎಂದು ಹೇಳಿದರು. ಜಯ ಮೃತ್ಯುಂಜಯ ಸ್ವಾಮೀಜಿ BJP ಏಜೆಂಟ್, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ: ಕೆಎಸ್ ಶಿವರಾಮು ಎಚ್ಚರಿಕೆ ನಾವು ಉಗ್ರ ಹೋರಾಟ ಮಾಡುತ್ತೇವೆ.

ಈ ಹೋರಾಟ ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ವಿರುದ್ಧ ಅಲ್ಲ. ಪಂಚಮಸಾಲಿಗಳ ನಾಯಕತ್ವ ತುಳಿದವರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಅಂದು, ಕಿತ್ತೂರು ರಾಣಿ ಚನ್ನಮ್ಮಳಿಗೆ ಮೋಸ ಮಾಡಿದ ಶಕ್ತಿಗಳೇ ಈಗ ಹೀಗೆ ಮಾಡುತ್ತಿವೆ. 21ನೇ ಶತಮಾನದಲ್ಲಿ ಅದೇ ಶಕ್ತಿಗಳು ಅಟ್ಟಹಾಸ ಮೆರೆಯುತ್ತಿವೆ.

ಉಚ್ಛಾಟನೆ ವಾಪಸ್ ಪಡೆಯಲೇಬೇಕು. ಇಲ್ಲದೇ ಹೋದಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಬೆಳಗಾವಿಯಲ್ಲಿ ನಾಳೆ ಸಭೆ ಕರೆಯುತ್ತೇನೆ. ಮುಂದೆ ಒಂದು ದಿನ ರಾಜ್ಯದ್ಯಂತ ಪ್ರತಿಭಟನೆ ಮಾಡುತ್ತೇವೆ.

ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲರಂತೆ ಯತ್ನಾಳರಿಗೂ ಮಾಡುತ್ತಿದ್ದಾರೆ. ಹೈಕಮಾಂಡ್ ನಮಗೆ ಕುಟುಂಬ ರಾಜಕಾರಣ ಬೇಕು ಎಂದು ನೇರವಾಗಿ ಹೇಳಲಿ. ನಾಳೆ ಎಲ್ಲವನ್ನೂ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಗುಡುಗಿದರು.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...