ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ

59
ಕಪ್ಪು ಪಟ್ಟಿಯಲ್ಲಿರುವ ಆರ್ ಟಿಐ ಕಾರ್ಯಕರ್ತನ ಹೆಸರು ತೆಗೆಯಲು ರೂ. 1 ಲಕ್ಷ ಲಂಚ ಪಡೆಯುವಾಗ ರಾಜ್ಯ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.


ಕಪ್ಪುಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಅವರನ್ನು ಹೆಸರು ತೆಗೆಯಲು ಡಾಕಪ್ಪ ಅವರು ರೂ. 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಗುರುವಾರ ರೂ. 1 ಲಕ್ಷದ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡ ಬಳಿಕ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿವೈಎಸ್ ಪಿ ಗೀತಾ ಬೇನಾಳ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...