ಭದ್ರತಾ ಪಡೆ ಮತ್ತು ನಕ್ಸಲ್ ರ ನಡುವೆ ಗುಂಡಿನ ಚಕಮಕಿ 16 ನಕ್ಸಲರು ಎನ್ಕೌಂಟರ್ ಗೆ ಬಲಿ

77

“ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದೊಳಗೆ ಬೆಳಗಿನ ಹೊತ್ತು ಗುಂಡಿನ ಚಕಮಕಿ ನಡೆದಿದೆ.

ಕೆರ್ಲಾಪಾಲ್ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದರು.

ಜಿಲ್ಲಾ ಮೀಸಲು ಪಡೆ (DRG) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಎನ್ ಕೌಂಟರ್ ನಲ್ಲಿ ಭಾಗಿಯಾಗಿದ್ದರು.

ಎನ್‌ಕೌಂಟರ್ ಸ್ಥಳದಿಂದ ಇದುವರೆಗೆ 16 ನಕ್ಸಲರ ಶವಗಳನ್ನು ಹೊರತೆಗೆಯಲಾಗಿದೆ

. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...