ಭೂಕಂಪದಿಂದ ಒಂದು ಸಾವಿರ ಜನರ ಸಾವು ಮ್ಯಾನ್ಮಾರ್  ನೆರವರಿಗೆ ಮುಂದಾದ ಭಾರತ ಸರಕಾರ ಆಪರೇಷನ್ ಬ್ರಹ್ಮ ಆರಂಭ

71

” ಭೂಕಂಪನದಿಂದ ತತ್ತರಿಸಿರುವ ಮ್ಯಾನ್ಮಾರ್ ನಲ್ಲಿ ಮೃತರ ಸಂಖ್ಯೆ 1,000 ದಾಟುತ್ತಿದ್ದಂತೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಭಾರತ

ಶನಿವಾರ ಸಂಜೆ ಆಪರೇಷನ್‌ ಬ್ರಹ್ಮದಡಿ ಎರಡು ನೌಕಾ ಹಡಗುಗಳನ್ನು ಕಳುಹಿಸಿದ್ದು, ಏರ್ ಲಿಫ್ಟ್ ಮಾಡಲು ಫೀಲ್ಡ್ ಆಸ್ಪತ್ರೆ ವ್ಯವಸ್ಥೆ ಮಾಡಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಹದಿನೈದು ಟನ್‌ ಪರಿಹಾರ ಸಾಮಗ್ರಿಗಳನ್ನು ಹೊತ್ತು ಭಾರತದ ವಾಯುಪಡೆಯ ಸಿ-130 ಜೆ ವಿಮಾನವು ಮ್ಯಾನ್ಮಾರ್‌ನ ಯಾಂಗಾನ್‌ ನಗರವನ್ನು ತಲುಪಿದೆ.


ಟೆಂಟ್‌ಗಳು, ಬ್ಲಾಂಕೆಟ್‌ಗಳು, ಸ್ಲೀಪಿಂಗ್‌ ಬ್ಯಾಗ್‌ಗಳು, ಫುಡ್‌ ಪ್ಯಾಕೆಟ್‌ಗಳು, ಹೈಜೀನ್‌ ಕಿಟ್‌ಗಳು, ಜೆನೆರೇಟರ್‌ಗಳು ಹಾಗೂ ಅತ್ಯಗತ್ಯ ಔಷಧಿಗಳನ್ನು ಕಳುಹಿಸಲಾಗಿದೆ.

ಈಗಾಗಲೇ ಹದಿನೈದು ಟನ್ ಪರಿಹಾರ ಸಾಮಗ್ರಿಗಳನ್ನು ಮ್ಯಾನ್ಮಾರ್‌ಗೆ ತಲುಪಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದೆ.

118 ಸದಸ್ಯರ ಭಾರತೀಯ ಸೇನೆಯ ಫೀಲ್ಡ್ ಆಸ್ಪತ್ರೆಯ ಘಟಕ ಆಗ್ರಾದಿಂದ ಮಾಂಡಲೆಗೆ ತೆರಳುತ್ತಿದೆ. ಮ್ಯಾನ್ಮಾರ್ ಜನರಿಗೆ ಪ್ರಥಮ ಚಿಕಿತ್ಸೆ ಮತ್ತು ತುರ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲು ತಂಡವು ಸಹಾಯ ಮಾಡುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ

“ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ....

ತನ್ನ ಪ್ರದೇಶಗಳಿಗೆ ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಹಿಂದೂ ಹೆಸರು ಮರುನಾಮಕರಣ, ಬದಲಾಗುತ್ತಿದೇಯಾ ಪಾಕಿಸ್ತಾನ??

ಲಾಹೋರ್: ಭಾರತದ ಪ್ರಧಾನಿ ಮೋದಿ ಅಖಂಡ ಭಾರತದ ಕುರಿತು ಮಾಡಿದ್ದ ಭಾಷಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲಿ...

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....