ಮುಡಾ ಆಯುಕ್ತರ ಕರ್ತವ್ಯಕ್ಕೆ ಅಡ್ಡಿ, ಬೆದರಿಕೆ ಬ್ರೋಕರ್ ಗಳ ವಿರುದ್ಧ ಪ್ರಕರಣ ದಾಖಲು

57

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರ್ ಗಳ ಆಟಾಟೋಪ ಮಿತಿಮೀರಿದ್ದು ಮುಡಾ ಆಯುಕ್ತರಿಗೇ ಬೆದರಿಕೆ ಹಾಕಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಇದರಿಂದ ನೊಂದ ಮುಡಾ ಕಮಿಷನರ್ ನೂರ್ ಝಹರಾ ಖಾನಂ ಅವರು ಇಬ್ಬರು ಬ್ರೋಕರ್ ಗಳ ವಿರುದ್ಧ ಉರ್ವಾ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ಕಳೆದ ಜನವರಿ 7ರಂದು ಮುಡಾ ಕಚೇರಿ ಒಳಕ್ಕೆ ನುಗ್ಗಿದ್ದ ಬ್ರೋಕರ್ ವ್ಯಕ್ತಿಯೊಬ್ಬ ಸಿಬಂದಿ ಇಲ್ಲದ ಸಂದರ್ಭದಲ್ಲಿ ಕಚೇರಿ ದಾಖಲೆಗಳನ್ನು ಪರಿಶೀಲಿಸಿ ಫೋಟೊ ನಕಲು ಮಾಡಿದ್ದ ಘಟನೆ ನಡೆದಿತ್ತು.

ಇದರ ಸಿಸಿಟಿವಿ ವಿಡಿಯೋ ಹೊರ ಬಂದಿದ್ದರಿಂದ ಮುಡಾ ಕಚೇರಿಯ ಬ್ರೋಕರ್ ವ್ಯವಹಾರ ಜಗಜ್ಜಾಹೀರಾಗಿತ್ತು. ಆನಂತರ ಮೂಡಾ ಕಮಿಷನರ್ ನೂರ್ ಝಹರಾ ಅವರು, ಸಿಬಂದಿ ಹೊರತುಪಡಿಸಿ ಇತರ ಯಾರು ಕೂಡ ಕಚೇರಿ ಒಳ ಬರುವಂತಿಲ್ಲ ಎಂದು ನಿರ್ಬಂಧ ವಿಧಿಸಿದ್ದರು. ಇದರಿಂದ ಕಸಿವಿಸಿಗೊಳಗಾದ ಬ್ರೋಕರ್ ಗಳು,

ಮುಡಾ ಕಮಿಷನರ್ ವಿರುದ್ಧ ಇತರ ಬ್ರೋಕರುಗಳನ್ನು ಒಟ್ಟುಗೂಡಿಸಿ ವಾಟ್ಸಪ್ ಗ್ರೂಪ್ ರಚಿಸಿ ಮಹಿಳಾ ಕಮಿಷನರ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ. ಅಧಿಕಾರಿ ಬಗ್ಗೆ ಅವಮಾನಕರ ಸಂದೇಶಗಳನ್ನು ಪೋಸ್ಟ್ ಮಾಡುವುದು, ಗುಂಪು ಕೂಡಿಕೊಂಡು ಕಚೇರಿ ಒಳಗೆ ಬಂದು ಕರ್ತವ್ಯಕ್ಕೆ ಅಡ್ಡಿಪಡಿಸುವುದು,

ಫೋನ್ ಮೂಲಕ ಜೀವ ಬೆದರಿಕೆ ಒಡ್ಡುವುದಲ್ಲದೆ, ಸಾರ್ವಜನಿಕರ ಮುಂದೆ ಕಮಿಷನರ್ ಅವರನ್ನು ಅವಮಾನಿಸುವುದು, ಜನರನ್ನು ಸೇರಿಸಿ ಶಾಂತಿ ಕದಡಲು ಯತ್ನಿಸುವುದು, ಮಾಟಮಂತ್ರ ಬೆದರಿಕೆ ಒಡ್ಡುವ ಕೆಲಸ ಮಾಡಿದ್ದಾರೆಂದು ಮುಡಾ ಕಮಿಷನರ್ ನೂರ್ ಝಹರಾ ದೂರಿನಲ್ಲಿ ತಿಳಿಸಿದ್ದಾರೆ.

ದೂರು ಹಿನ್ನೆಲೆಯಲ್ಲಿ ಉರ್ವಾ ಪೊಲೀಸರು ಆರೋಪಿಗಳ ವಿರುದ್ಧ ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 132, 351, 356(1), 61(2) ಮತ್ತು 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...